ಇಂದು ರಾಷ್ಟ್ರಪತಿ ಚುನಾವಣೆ ಫಲಿತಾಂಶ: ಮೀರಾ ಕುಮಾರ್, ಕೋವಿಂದ್ ಭವಿಷ್ಯ ನಿರ್ಧಾರ
ಜುಲೈ 17 ರಂದು ನಡೆದ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯಲಿದೆ...

Published On :
ನವದೆಹಲಿ: ಜುಲೈ 17 ರಂದು ನಡೆದ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯಲಿದೆ.
ಎನ್‌ಡಿಎ ಅಭ್ಯರ್ಥಿ ರಾಮನಾಥ ಕೋವಿಂದ್ ಮತ್ತು ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಮೀರಾ ಕುಮಾರ್ ನಡುವಣ ಸ್ಪರ್ಧೆಯ ಫಲಿತಾಂಶ ಸಂಜೆ 5 ಗಂಟೆ ವೇಳೆಗೆ ಪ್ರಕಟವಾಗಲಿದೆ.
ಬೆಳಗ್ಗೆ 11 ಗಂಟೆಗೆ ಸಂಸತ್ತಿನ ಮೊದಲ ಮಹಡಿಯ 62ನೇ ಕೊಠಿಯಲ್ಲಿ ಮತಎಣಿಕೆ ಆರಂಭವಾಗಲಿದೆ. ಎಲ್ಲ ರಾಜ್ಯಗಳಿಂದ ಮತಪೆಟ್ಟಿಗೆಗಳು ಮಂಗಳವಾರವೇ ಸಂಸತ್ ಭವನಕ್ಕೆ ತಲುಪಿವೆ.
ಸಂಸತ್ ಭವನ ಸೇರಿ ಒಟ್ಟು 32 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು, ಭಾರತದ 14ನೇ ರಾಷ್ಟ್ರಪತಿಯನ್ನು ಆಯ್ಕೆ ಮಾಡುವ ಚುನಾವಣೆಯಲ್ಲಿ ಶೇ.99 ರಷ್ಚು ಮತದಾನವಾಗಿತ್ತು. 15 ರಾಜ್ಯಗಳಲ್ಲಿ ಶೇ. 100 ರಷ್ಚು ಮತದಾನವಾಗಿತ್ತು.
ಮೊದಲಿಗೆ ಸಂಸತ್ ಭವನದಲ್ಲಿ ನಡೆದ ಮತದಾನದ ಮತಗಳನ್ನು ಎಣಿಕೆ ಮಾಡಲಾಗುವುದು. ನಂತರ ಇಂಗ್ಲಿಷ್ ವರ್ಣಮಾಲೆ ಆಧಾರದಂತೆ ರಾಜ್ಯಗಳ ಮತ ಎಣಿಕೆ ಕಾರ್ಯ ನಡೆಯಲಿದೆ.
4,120 ಶಾಸಕರು ಹಾಗೂ 776 ಮಂದಿ ಸಂಸದರು ಮತ ಚಲಾಯಿಸುವ ಅರ್ಹತೆ ಹೊಂದಿದ್ದಾರೆ. ಸಂಸದರ ಮತ ಮೌಲ್ಯ 708 ಆಗಿದ್ದು, ಶಾಸಕರ ಮತ ಮೌಲ್ಯ ಅವರು ಪ್ರತಿನಿಧಿಸುವ ಕ್ಷೇತ್ರದ ಜನಸಂಖ್ಯೆಯನ್ನು ಆಧರಿಸಿರುತ್ತದೆ.
ಸಾಯಂಕಾಲ ಐದು ಗಂಟೆ ವೇಳೆಗೆ ರಾಷ್ಟ್ರಪತಿ ಭವನದಿಂದ ಅಧಿಕೃತ ಫಲಿತಾಂಶ ಹೊರಬೀಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಫಲಿತಾಂಶResultspresidential electionRam Nath Kovindರಾಮ್ ನಾಥ್ ಕೋವಿಂದ್ರಾಷ್ಟ್ರಪತಿ ಚುನಾವಣೆMeira Kumarಮೀರಾ ಕುಮಾರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


