ದೇಶ

ಲಾಲು ಪುತ್ರಿ ಮೀಸಾ ಭಾರತಿ ಸಿಎ ರಾಜೇಶ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಇಡಿ

8 ಸಾವಿರ ಕೋಟಿ ರುಪಾಯಿ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ....

ಲಾಲು ಪುತ್ರಿ ಮೀಸಾ ಭಾರತಿ ಸಿಎ ರಾಜೇಶ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಇಡಿ
ಲಾಲು ಪುತ್ರಿ ಮೀಸಾ ಭಾರತಿ
Published On :
ನವದೆಹಲಿ: 8 ಸಾವಿರ ಕೋಟಿ ರುಪಾಯಿ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಪುತ್ರಿ ಮೀಸಾ ಭಾರತಿ ಅವರ ಚಾರ್ಟಡ್ ಅಕೌಂಟೆಂಟ್ (ಸಿಎ) ರಾಜೇಶ್ ಅಗರ್‌ವಾಲ್‌ ಅವರ ವಿರುದ್ಧ ಜಾರಿ ನಿರ್ದೇಶನಾಲಯದ (ಇಡಿ) ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ.
ಅಕ್ರಮ ಹಣ ವಹಿವಾಟು ತಡೆ ಕಾಯ್ದೆಯಡಿ ರಾಜೇಶ್ ಅಗರ್ ವಾಲ್ ವಿರುದ್ಧ ಜಾರಿ ನಿರ್ದೇಶನಾಲಯ ಇಂದು ವಿಶೇಷ ಕೋರ್ಟ್ ನ್ಯಾಯಾಧೀಶ ನರೇಶ್ ಕುಮಾರ್ ಮಲ್ಹೋತ್ರಾ ಅವರಿಗೆ ಚಾರ್ಜ್ ಶೀಟ್ ಸಲ್ಲಿಸಿದೆ.
ಬೇನಾಮಿ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲು ಪುತ್ರಿ ಮೀಸಾ ಭಾರತಿಯ ವಿರುದ್ಧವೂ ಇಡಿ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ.
ರಾಜೇಶ್ ಅಗರ್ ವಾಲ್ ಅವರು ಅನುಮಾನಾಸ್ಪದ ವ್ಯವಹಾರಗಳ ಮೂಲಕ ಕಪ್ಪುಹಣವನ್ನು ಸಕ್ರಮಗೊಳಿಸುವ ದಂಧೆಯಲ್ಲಿ ತೊಡಗಿಸಿಕೊಂಡಿರುವ ಆರೋಪ ಎದುರಿಸುತ್ತಿದ್ದು, ಶೆಲ್ ಕಂಪೆನಿ ಅವ್ಯವಹಾರಕ್ಕೆ ಸಂಬಂಧಿಸಿ ಮಾರ್ಚ್‌ 20ರಂದು ಬಂಧನಕ್ಕೊಳಗಾಗಿದ್ದ ಎಸ್‌.ಕೆ. ಜೈನ್ ಮತ್ತು ವಿ.ಕೆ. ಜೈನ್ ಅವರ ನೆರವಿನಿಂದ ರಾಜೇಶ್ ಕಪ್ಪುಹಣ ಸಕ್ರಮಗೊಳಿಸುವ ವ್ಯವಹಾರ ನಡೆಸುತ್ತಿದ್ದರು ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶೆಲ್ ಕಂಪೆನಿಯ ಕನಿಷ್ಠ 90 ಶಾಖೆಗಳ ಮೇಲೆ ಜಾರಿ ನಿರ್ದೇಶನಾಲಯ ಹದ್ದಿನ ಕಣ್ಣಿಟ್ಟಿದೆ. ಭಾರತಿ ಅವರ ಪತಿಯ ಕಂಪನಿ ‘ಮಿಶೈಲ್ ಪ್ಯಾಕರ್ಸ್ ಆ್ಯಂಡ್ ಪ್ರಿಂಟರ್ಸ್’ ಅಕ್ರಮಕ್ಕೆ ನೆರವು ನೀಡಿದ ಆರೋಪವೂ ಅಗರ್‌ವಾಲ್ ವಿರುದ್ಧ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.