2019 ಚುನಾವಣೆ: 'ಭಾರತದಿಂದ ಬಿಜೆಪಿ ತೊಲಗಿಸಿ' ಅಭಿಯಾನಕ್ಕೆ ಮಮತಾ ಬ್ಯಾನರ್ಜಿ ಕರೆ!
ಭಾರತದಿಂದ ಬಿಜೆಪಿ ತೊಲಗಿಸಿ ಅಭಿಯಾನಕ್ಕೆ ಕರೆ ನೀಡಿದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಸರಿ...

Published On :
ಕೋಲ್ಕತ್ತಾ: ಭಾರತದಿಂದ ಬಿಜೆಪಿ ತೊಲಗಿಸಿ ಅಭಿಯಾನಕ್ಕೆ ಕರೆ ನೀಡಿದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಸರಿ ಪಾಳಯದ ವಿರುದ್ಧ ನಾವೆಲ್ಲರೂ ಒಗ್ಗೂಡಿ ಹೋರಾಡಬೇಕಿದೆ ಎಂದು ಹೇಳಿದ್ದಾರೆ.
ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ನೆರೆರಾಷ್ಟ್ರಗಳ ಜತೆ ಉತ್ತಮ ಸಂಬಂಧ ವೃದ್ಧಿಸುವುದು ಸೇರಿದಂತೆ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದ್ದು ಭಾರತದಿಂದ ಬಿಜೆಪಿ ತೊಲಗಿಸಿ ಅಭಿಯಾನವನ್ನು ಆಗಸ್ಟ್ 9ರಿಂದ ಪ್ರಾರಂಭಿಸಲಾಗುವುದು ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ.
ನಾವು ಬಿಜೆಪಿಯನ್ನು ಭಾರತದಿಂದ ತೊಲಗಿಸುತ್ತೇವೆ. ಇದು ನಮ್ಮ ಸವಾಲು. ಶಾರದ, ನಾರದ ಪ್ರಕರಣಗಳ ಮುಖೇನ ನಮ್ಮನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಆದರೆ ಅದಕ್ಕೆಲ್ಲಾ ನಾವು ಅಂಜುವುದಿಲ್ಲ. ನಾವು ತಪ್ಪ ಮಾಡದೇ ಇದ್ದಾಗ ನಮ್ಮ ತಲೆಯನ್ನು ಬಾಗಿಸುವುದಿಲ್ಲ ಎಂದು ಬೃಹತ್ ರ್ಯಾಲಿಯಲ್ಲಿ ಮಮತಾ ಹೇಳಿದ್ದಾರೆ.
ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷ ಅಭ್ಯರ್ಥಿ ಮೀರಾ ಕುಮಾರ್ ಅವರನ್ನು 18 ರಾಜಕೀಯ ಪಕ್ಷಗಳು ಒಗ್ಗೂಡಿ ಬೆಂಬಲಿಸಿದ್ದೀರಿ. ಇದೇ ಒಗ್ಗಟ್ಟನ್ನು ಪ್ರದರ್ಶಿಸಿ ಮುಂದಿನ 2019ರ ಲೋಕಸಭಾ ಚುನಾವಣೆಯಲ್ಲಿ ಸುಲಭ ಗೆಲುವಿನ ನಿರೀಕ್ಷೆಯಲ್ಲಿರುವ ಬಿಜೆಪಿಗೆ ಕಠಿಣ ಸವಾಲು ನೀಡಬೇಕು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


