ದೇಶ

ರಾಜಸ್ತಾನದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ 9 ಮಂದಿ ಸಾವು, ಹಲವರು ಗಂಭೀರ!

ರಾಜಸ್ತಾನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

ರಾಜಸ್ತಾನದಲ್ಲಿ  ಖಾಸಗಿ ಬಸ್ ಪಲ್ಟಿಯಾಗಿ 9 ಮಂದಿ ಸಾವು, ಹಲವರು ಗಂಭೀರ!
ಸಾಂದರ್ಭಿಕ ಚಿತ್ರ
Published On :

ಉದಯ್ ಪುರ: ರಾಜಸ್ತಾನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

ರಾಜಸ್ತಾನದ ಉದಯ್ ಪುರದ ನೆಹ್ಲಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ವೇಗದಲ್ಲಿದ್ದ ಬಸ್ ಚಾಲಕ ಮುಂದೆ ಹೋಗುತ್ತಿದ್ದ ಬೈಕ್ ಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಸ್ಟೇರಿಂಗ್ ತಿರುಗಿಸಿದ್ದಾನೆ, ಈ ವೇಳೆ ಬಸ್ ಪಲ್ಟಿಯಾಗಿ  9 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಪೈಕಿ ಆರು ಮಹಿಳೆಯರು 3 ಮಂದಿ ಪುರುಷರು ಎಂದು ತಿಳಿದುಬಂದಿದೆ.

ಬಸ್ ನಿನ್ನೆ ರಾತ್ರಿಯಷ್ಟೇ ಅಹ್ಮದಾಬಾದ್ ನಿಂದ ಪುಷ್ಕರ್ ಮತ್ತು ಹರಿದ್ವಾರ ಸೇರಿದಂತೆ 16 ತೀರ್ಥಕ್ಷೇತ್ರಗಳಿಗೆ ಪ್ರವಾಸಿಗರನ್ನು ಹೊತ್ತು ಪ್ರಯಾಣ ಬೆಳೆಸಿತ್ತು ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ  ಗಾಯಾಳು ಪ್ರವಾಸಿಗರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.