ಪ್ರಸಕ್ತ ಆರ್ಥಿಕ ವರ್ಷದಲ್ಲಿ ಭಾರತ ಶೇ.7.5 ರಷ್ಟು ಬೆಳವಣಿಗೆ ದಾಖಲಿಸುವ ಸಾಧ್ಯತೆ: ಪನಗಾರಿಯಾ
ಪ್ರಸಕ್ತ ಸಾಲಿನಲ್ಲಿ ಭಾರತ ಶೇ.7.5 ರಷ್ಟು ಆರ್ಥಿಕ ಬೆಳವಣಿಗೆ ದಾಖಲಿಸುವ ಸಾಧ್ಯತೆ ಇದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗಾರಿಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Published On :
ನ್ಯೂಯಾರ್ಕ್: ಪ್ರಸಕ್ತ ಸಾಲಿನಲ್ಲಿ ಭಾರತ ಶೇ.7.5 ರಷ್ಟು ಆರ್ಥಿಕ ಬೆಳವಣಿಗೆ ದಾಖಲಿಸುವ ಸಾಧ್ಯತೆ ಇದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗಾರಿಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಅತ್ಯುತ್ತಮ ಉದ್ಯೋಗಗಳನ್ನು ಸೃಷ್ಟಿಸುವುದು ಅತ್ಯಂತ ದೊಡ್ಡ ಸವಾಲಾಗಿದೆ ಎಂದು ಇದೇ ವೇಳೆ ಪನಗಾರಿಯಾ ಒಪ್ಪಿಕೊಂಡಿದ್ದಾರೆ. ಆದರೆ ಪ್ರಸಕ್ತ ಸಾಲಿನಲ್ಲಿ (2017-18) ರಲ್ಲಿ ಶೇ.7.5 ರಷ್ಟು ಆರ್ಥಿಕ ಬೆಳವಣಿಗೆ ಸಾಧಿಸಲಿದ್ದೇವೆ, ವರ್ಷದ ಕೊನೆಯ ತ್ರೈಮಾಸಿಕದ ವೇಳೆಗೆ ಶೇ.8 ರ ಹತ್ತಿರ ತಲುಪುತ್ತೇವೆ ಎಂದು ಪನಗಾರಿಯಾ ಹೇಳಿದ್ದಾರೆ.
ಕಳೆದ ವಾರ ಅರವಿಂದ್ ಪನಗಾರಿಯಾ, ಕಳೆದ ವಾರ ವಿಶ್ವ ಸಂಸ್ಥೆಯ ಉನ್ನತ ಮಟ್ಟದ ರಾಜಕೀಯ ವೇದಿಕೆಯಲ್ಲಿ ಸಮರ್ಥನೀಯ ಅಭಿವೃದ್ಧಿ ಗುರಿಗಳ ಬಗ್ಗೆ ಭಾರತದ ರಾಷ್ಟ್ರೀಯ ವಿಮರ್ಶಾತ್ಮಕ ವರದಿಯನ್ನು ಮಂಡಿಸಿದ್ದರು. ಈ ವೇಳೆ ಪ್ರಸಕ್ತ ಸಾಲಿನಲ್ಲಿ (2017-18) ರಲ್ಲಿ ಶೇ.7.5 ರಷ್ಟು ಆರ್ಥಿಕ ಬೆಳವಣಿಗೆ ಸಾಧಿಸಲಿದ್ದೇವೆ ಎಂದು ಹೇಳಿದ್ದರು. ಈಗ ಪಿಟಿಐ ಗೆ ನೀಡಿರುವ ಸಂದರ್ಶನದಲ್ಲಿಯೂ ಭಾರತ ಶೇ.7.5 ರಷ್ಟು ಬೆಳವಣಿಗೆ ದಾಖಲಿಸುವ ಸಾಧ್ಯತೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


