ಉಗ್ರರ ಒಳ ನುಸುಳುವಿಕೆ ವಿಫಲ; ಸೇನೆಯಿಂದ ಓರ್ವ ಉಗ್ರನ ಹತ್ಯೆ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲದ ಉಗ್ರರ ಒಳನುಸುಳುವಿಕೆಯನ್ನು ಭಾರತೀಯ ಸೇನೆ ವಿಫಲಗೊಳಿಸಿದ್ದು, ಓರ್ವ ಉಗ್ರನನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲದ ಉಗ್ರರ ಒಳನುಸುಳುವಿಕೆಯನ್ನು ಭಾರತೀಯ ಸೇನೆ ವಿಫಲಗೊಳಿಸಿದ್ದು, ಓರ್ವ ಉಗ್ರನನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ.
ದಕ್ಷಿಣ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್ ಬಳಿ ಉಗ್ರರು ಒಳ ನುಸುಳುತ್ತಿರುವುದನ್ನು ಕಂಡ ಯೋಧರು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಓರ್ವ ಉಗ್ರ ಹತನಾಗಿದ್ದಾನೆ. ಮಚಿಲ್ ಸೆಕ್ಟರ್ ಬಳಿ ಶಂಕಾಸ್ಪದ ಚಟುವಟಿಕೆ ನಡೆಯುತ್ತಿದ್ದ ಹಿನ್ನಲ್ಲೆಯಲ್ಲಿ ಆಲ್ಲಿಗೆ ಸೈನಿಕರು ದೌಡಾಯಿಸಿದ್ದು, ಈ ವೇಳೆ ಸೈನಿಕರು ಉಗ್ರರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ತಿಳಿಬಂದಿದೆ.
ಘಟನಾ ಸ್ಥಳದಲ್ಲಿ ಸೈನಿಕರು ತೀವ್ರ ಶೋಧ ನಡೆಸುತ್ತಿದ್ದು, ಹೆಚ್ಚುವರಿ ಪಡೆಗಳನ್ನು ಕರೆಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


