ಲೋಕಸಭೆ: 5 ದಿನಗಳ ಕಾಲ ಆರು ಕಾಂಗ್ರೆಸ್ ಸಂಸದರ ಅಮಾನತು
ಲೋಕಸಭೆಯಲ್ಲಿ ಸ್ಪೀಕರ್ ಮೇಲೆ ಕಾಗದ ಪತ್ರಗಳನ್ನು ತೂರಿದ ಆರೋಪದ ಮೇರೆಗೆ ವಿಪಕ್ಷ ಕಾಂಗ್ರೆಸ್ ನ 6 ಮಂದಿ ಸಂಸದರನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಸೋಮವಾರ ಐದು ದಿನಗಳ ಕಾಲ ಸದನದಿಂದ ಅಮಾನತು ಮಾಡಿದ್ದಾರೆ.

ನವದೆಹಲಿ: ಲೋಕಸಭೆಯಲ್ಲಿ ಸ್ಪೀಕರ್ ಮೇಲೆ ಕಾಗದ ಪತ್ರಗಳನ್ನು ತೂರಿದ ಆರೋಪದ ಮೇರೆಗೆ ವಿಪಕ್ಷ ಕಾಂಗ್ರೆಸ್ ನ 6 ಮಂದಿ ಸಂಸದರನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಸೋಮವಾರ ಐದು ದಿನಗಳ ಕಾಲ ಸದನದಿಂದ ಅಮಾನತು ಮಾಡಿದ್ದಾರೆ.
ಕಾಂಗ್ರೆಸ್ ನ ಸದಸ್ಯರಾದ ಗೌರವ ಗೊಗೊಯಿ, ಕೆ. ಸುರೇಶ್, ಅಧೀರ್ ರಾಜನ್ ಚೌಧರಿ, ರಂಜಿತ್ ರಂಜನ್, ಸುಷ್ಮಿತಾ ದೇವಿ ಮತ್ತು ಎಂಕೆ ರಾಘವನ್ ಅವರನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಅಮಾನತು ಮಾಡಿದ್ದಾರೆ.
ಗೋರಕ್ಷಣೆ ಹೆಸರಲ್ಲಿ ದೇಶಾದ್ಯಂತ ಹಿಂಸಾಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸದಸ್ಯರು, ಶೇಮ್ ಶೇಮ್ ಎಂದು ಘೋಷಣೆಗಳನ್ನು ಕೂಗುತ್ತ, ಸ್ಪೀಕರ್ ಅವರ ಕುರ್ಚಿ ಬಳಿ ಮುಖ್ಯವಾದ ಕಾಗದ ಪತ್ರಗಳನ್ನು ತೂರಿದರು. ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸಂಸದರನ್ನು ಎಷ್ಟೇ ಸಮಾಧಾನ ಪಡಿಸಲು ಯತ್ನಿಸಿದರೂ ಸಮಾಧಾನವಾಗದ ಸಂಸದರು ಸ್ಪೀಕರ್ ಅವರ ಕಾರ್ಯದರ್ಶಿಗಳ ಬಳಿ ಇದ್ದ ಕಾಗದಗಳನ್ನೂ ಕೂಡ ಕಿತ್ತು ಎಸೆದರು.
ಹೀಗಾಗಿ ಸದನವನ್ನು 2 ಗಂಟೆಗೆ ಮುಂದೂಡಿದ ಸ್ಪೀಕರ್ ಅವರು 2 ಗಂಟೆಗೆ ಸದನ ಆರಂಭವಾಗುತ್ತಿದ್ದಂತಿಯೇ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಆರು ಮಂದಿ ಸಂಸದರನ್ನು ಐದು ದಿನಗಳ ಕಲಾಪದಿಂದ ಅಮಾನತು ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


