ರಾಷ್ಟ್ರಧ್ವಜ ಸಂಹಿತೆ ಉಲ್ಲಂಘನೆ: ಕ್ಷಮೆಯಾಚಿಸಿದ ನಟ ಅಕ್ಷಯ್ ಕುಮಾರ್
ಲಾರ್ಡ್ಸ್'ನಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯಾವಳಿ ವೇಳೆ ರಾಷ್ಟ್ರಧ್ವಜ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಸೋಮವಾರ ಕ್ಷಮೆಯಾಚಿಸಿದ್ದಾರೆ...

Published On :
ನವದೆಹಲಿ: ಲಾರ್ಡ್ಸ್'ನಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯಾವಳಿ ವೇಳೆ ರಾಷ್ಟ್ರಧ್ವಜ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಸೋಮವಾರ ಕ್ಷಮೆಯಾಚಿಸಿದ್ದಾರೆ.
ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಿನ್ನೆ ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯಾವಳಿ ನಡೆಯುತ್ತಿತ್ತು. ಭಾರತ ತಂಡದ ಮಹಿಳಾ ಆಟಗಾರರಿಗೆ ನಟ ಅಕ್ಷಯ್ ಕುಮಾರ್ ಅವರು ಶುಭ ಹಾರೈಸಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಫೋಟೋವನ್ನು ಹಾಕುವ ಮೂಲಕ ಟ್ವೀಟ್ ಮಾಡಿದ್ದರು.
ನಟ ಅಕ್ಷಯ್ ಕುಮಾರ್ ಅವರು ರಾಷ್ಟ್ರಧ್ವಜವನ್ನು ಹಿಡಿದುಕೊಂಡಿದ್ದ ಫೋಟೋವನ್ನು ಹಾಕಿದ್ದರು. ಫೋಟೋದಲ್ಲಿ ಅಕ್ಷಯ್ ಅವರು ಹಸಿರು ಬಣ್ಣ ಮೇಲೆ ಹಾಗೂ ಕೇಸರಿ ಬಣ್ಣ ಕೆಳಗೆ ಹಿಡಿದುಕೊಂಡಿರುವುದು ಕಂಡುಬಂದಿತ್ತು. ಇದಕ್ಕೆ ಸಾಕಷ್ಟು ವಿರೋಧ ಹಾಗೂ ಆಕ್ರೋಶಗಳು ವ್ಯಕ್ತವಾಗಿದ್ದವು. ಅಕ್ಷಯ್ ಅವರು ರಾಷ್ಟ್ರಧ್ವಜ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಫೋಟೋವನ್ನು ಟ್ವಿಟರ್ ನಿಂದ ತೆಗೆದು ಹಾಕಿರುವ ಅಕ್ಷಯ್ ಅವರು ಕ್ಷಮೆಯಾಚಿಸಿದ್ದಾರೆ.
ರಾಷ್ಟ್ರಧ್ವಜ ಸಂಹಿತೆ ಉಲ್ಲಂಘನೆ ಮಾಡಿರುವುದಕ್ಕೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ಮುಜುಗರಕ್ಕೀಡು ಮಾಡುವ ಉದ್ದೇಶ ನನ್ನದಾಗಿರಲಿಲ್ಲ. ಫೋಟೋವನ್ನು ತೆಗೆದು ಹಾಕಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಾಷ್ಟ್ರಧ್ವಜAkshay Kumarಅಕ್ಷಯ್ ಕುಮಾರ್Code of Conductನೀತಿ ಸಂಹಿತೆ ಉಲ್ಲಂಘನೆಲಾರ್ಡ್ಸ್TricolourLordsಐಸಿಸಿ ಮಹಿಳಾ ವಿಶ್ವಕಪ್Women’s Cricket World Cup
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


