ನಟಿಯ ಅಪಹರಣ ಕೇಸು: ನಟ ದಿಲೀಪ್ ಗೆ ಜಾಮೀನು ನಿರಾಕರಿಸಿದ ಕೇರಳ ಹೈಕೋರ್ಟ್
ದಕ್ಷಿಣ ಭಾರತ ಚಿತ್ರರಂಗದ ಜನಪ್ರಿಯ ನಟಿಯ ಅಪಹರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣಕ್ಕೆ...

Published On :
ತಿರುವನಂತಪುರಂ: ದಕ್ಷಿಣ ಭಾರತ ಚಿತ್ರರಂಗದ ಜನಪ್ರಿಯ ನಟಿಯ ಅಪಹರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಿತೂರಿ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಮಲಯಾಳಂನ ಖ್ಯಾತ ನಟ ದಿಲೀಪ್ ಗೆ ಕೇರಳ ಹೈಕೋರ್ಟ್ ಜಾಮೀನು ತಿರಸ್ಕರಿಸಿದೆ.
ಕೇಸಿನ ಸಾಕ್ಷಿಗಳ ಮೇಲೆ ನಟ ಪ್ರಭಾವ ಬೀರಿರುವ ಸಾಧ್ಯತೆಯಿದೆ ಎಂದು ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.
ನಟಿಯ ಅಪಹರಣಕ್ಕೆ ಸಂಬಂಧಪಟ್ಟಂತೆ ಕಳೆದ 11ನೇ ತಾರೀಖಿನಂದು ಬಂಧನಕ್ಕೀಡಾದ ನಂತರ ದಿಲೀಪ್ ಅವರನ್ನು ಮಲಯಾಳ ಚಿತ್ರರಂಗದ ಕಲಾವಿದರ ಒಕ್ಕೂಟ(ಅಮ್ಮಾ)ದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಲಾಗಿತ್ತು.
ಬಂಧನದ ನಂತರ ದಿಲೀಪ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


