ಇಸ್ರೋ ಮಾಜಿ ಮುಖ್ಯಸ್ಥ ಯು.ಆರ್. ರಾವ್ ಅವರ ಅಗಲಿಕೆ ನೋವು ತಂದಿದೆ: ಪ್ರಧಾನಿ ಮೋದಿ
ಇಸ್ರೋ ಮಾಜಿ ಮುಖ್ಯಸ್ಥ ಯು.ಆರ್. ರಾವ್ ಅವರ ಅಗಲಿಕೆ ನೋವು ತಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ...

Published On :
ನವದೆಹಲಿ: ಇಸ್ರೋ ಮಾಜಿ ಮುಖ್ಯಸ್ಥ ಯು.ಆರ್. ರಾವ್ ಅವರ ಅಗಲಿಕೆ ನೋವು ತಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಯು.ಆರ್. ರಾವ್ ಅವರ ಅಗಲಿಕೆಯಿಂದ ಬಹಳ ನೋವಾಗಿದೆ. ಭಾರತದ ಬಾಹ್ಯಾಕಾಶದ ಯೋಜನೆಗಳಿಗೆ ರಾವ್ ಅವರ ಕೊಡುಗೆ ಅಪಾರ. ಅವರ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಬಹಳ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ ಮೊದಲ ಉಪಗ್ರಹ ಆರ್ಯಭಟ ಉಡಾವಣೆಯ ನೇತೃತ್ವವಹಿಸಿದ್ದ ಯು.ಆರ್. ರಾವ್ ಅವರು ಇಂದು ಬೆಳಿಗ್ಗೆ ನಿಧರನಾಗಿದ್ದಾರೆ. 1984ರಿಂದ 1994ರ ವರೆಗೆ ಇಸ್ರೋ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ರಾವ್ ಅವರು ತಿರುವನಂತಪುರಂ ನಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಆ್ಯಂಡ್ ಟೆಕ್ನಾಲಜಿಯ ಚಾನ್ಸಲರ್ ಆಗಿ ಸೇವೆ ಸಲ್ಲಿಸುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


