ದೇಶ

ಭಾರತೀಯರ ಅಪಹರಣ ಪ್ರಕರಣ: ಇರಾಕ್ ಜೊತೆ ಮಾತುಕತೆ ನಡೆಸಲಿರುವ ಸುಷ್ಮಾ ಸ್ವರಾಜ್

ಇರಾಕ್ ಮೊಸುಲ್ ನಲ್ಲಿ ಇಸಿಸ್ ಉಗ್ರರಿಂದ ಅಪಹರಣಕ್ಕೊಳಗಾಗಿರುವ 39 ಭಾರತೀಯರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಇರಾಕ್ ವಿದೇಶಾಂಗ ಸಚಿವರ ಜೊತೆಗೆ ಸೋಮವಾರ...

ಭಾರತೀಯರ ಅಪಹರಣ ಪ್ರಕರಣ: ಇರಾಕ್ ಜೊತೆ ಮಾತುಕತೆ ನಡೆಸಲಿರುವ ಸುಷ್ಮಾ ಸ್ವರಾಜ್
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್
Published On :
ನವದೆಹಲಿ: ಇರಾಕ್ ಮೊಸುಲ್ ನಲ್ಲಿ ಇಸಿಸ್ ಉಗ್ರರಿಂದ ಅಪಹರಣಕ್ಕೊಳಗಾಗಿರುವ 39 ಭಾರತೀಯರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಇರಾಕ್ ವಿದೇಶಾಂಗ ಸಚಿವರ ಜೊತೆಗೆ ಸೋಮವಾರ ಮಹತ್ವದ ಮಾತುಕತೆ ನಡೆಸಲಿದ್ದಾರೆ. 
ಮೂರು ವರ್ಷಗಳ ಹಿಂದೆ ಉಗ್ರರು ಪಂಜಾಬ್ ನ 39 ಜನರನ್ನು ಅಪಹರಿಸಿದ್ದರು. ಅಪಹರಣಕ್ಕೊಳಗಾಗಿರುವ ಭಾರತೀಯರ ಕುರಿತಂತೆ ಈ ವರೆಗೂ ಯಾವುದೇ ಸುಳಿವುಗಳು ಪತ್ತೆಯಾಗಿಲ್ಲ. 
ಇರಾಕ್ ವಿದೇಶಾಂಗ ಸಚಿವ ಇಬ್ರಾಹಿಂ ಅಲ್ ಜಫಾರಿಯವರು ಜು.24 ರಿಂದ 28ರವರೆಗೆ ನಾಲ್ಕು ದಿನಗಳ ಭಾರತಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಸುಷ್ಮಾ ಸ್ವರಾಜ್ ಅವರು ಅಪಹರಣಕ್ಕೊಳಗಾಗಿರುವ ಭಾರತೀಯರ ವಿಚಾರವನ್ನು ಪ್ರಸ್ತಾಪ ಮಾಡಲಿದ್ದಾರೆಂದು ಹೇಳಲಾಗುತ್ತಿದೆ. ಅಲ್ಲದೆ, ವ್ಯಾಪಾರ, ಇಂಧನ, ಸಹಕಾರ ಮತ್ತು ದ್ವಿಪಕ್ಷೀಯ ಸಂಬಂಧ ಬಲವರ್ಥನೆ ಕುರಿತಂತೆಯೂ ಮಾತುಕತೆ ನಡೆಸಲಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.