ದೇಶ

ಡೊಕ್ಲಾಮ್ ವಿವಾದಕ್ಕೆ ಭಾರತವೇ ಕಾರಣ, ಸೇನಾ ಪಡೆಯನ್ನು ವಾಪಸ್ ಕರೆಸಿಕೊಳ್ಳಬೇಕು: ಚೀನಾ ವಿದೇಶಾಂಗ ಸಚಿವ

ಸಿಕ್ಕಿಂ ನ ಡೊಕ್ಲಾಮ್ ಗಡಿಯಲ್ಲಿ ಉಂಟಾಗಿರುವ ವಿವಾದಕ್ಕೆ ಭಾರತವೇ ಕಾರಣ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಆರೋಪಿಸಿದ್ದು, ಭಾರತ ತನ್ನ ಸೇನಾ ಪಡೆಯನ್ನು ವಾಪಸ್ ಕರೆಸಿಕೊಳ್ಳಬೇಕೆಂದು...

ಡೊಕ್ಲಾಮ್ ವಿವಾದಕ್ಕೆ ಭಾರತವೇ ಕಾರಣ, ಸೇನಾ ಪಡೆಯನ್ನು ವಾಪಸ್ ಕರೆಸಿಕೊಳ್ಳಬೇಕು: ಚೀನಾ ವಿದೇಶಾಂಗ ಸಚಿವ
ವಾಂಗ್ ಯಿ
Published On :
ಬೀಜಿಂಗ್: ಸಿಕ್ಕಿಂ ನ ಡೊಕ್ಲಾಮ್ ಗಡಿಯಲ್ಲಿ ಉಂಟಾಗಿರುವ ವಿವಾದಕ್ಕೆ ಭಾರತವೇ ಕಾರಣ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಆರೋಪಿಸಿದ್ದು, ಭಾರತ ತನ್ನ ಸೇನಾ ಪಡೆಯನ್ನು ವಾಪಸ್ ಕರೆಸಿಕೊಳ್ಳಬೇಕೆಂದು ಎಂದು ಆಗ್ರಹಿಸಿದ್ದಾರೆ. 
ಗಡಿಯಲ್ಲಿ ಉಂಟಾಗಿರುವ ವಿವಾದದ ಸರಿ ತಪ್ಪುಗಳು ಸ್ಪಷ್ಟವಾಗಿವೆ. ಇದಕ್ಕೆ ಪೂರಕವಾಗಿ ಚೀನಾದ ಸೇನಾ ಪಡೆಗಳು ಭಾರತದ ಗಡಿಯೊಳಗೆ ಪ್ರವೇಶ ಮಾಡಿಲ್ಲ ಎಂದು ಭಾರತದ ಅಧಿಕಾರಿಗಳೇ ಹೇಳಿದ್ದು ತಾವೇ ಚೀನಾ ಪ್ರದೇಶಕ್ಕೆ ಅಕ್ರಮ ಪ್ರವೇಶ ಮಾಡಿದ್ದೇವೆ ಎಂಬುದನ್ನು ಒಪ್ಪಿದ್ದಾರೆ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ. 
ಡೊಕ್ಲಾಮ್ ನಲ್ಲಿ ವಿವಾದ ಉಂಟಾಗುತ್ತಿದ್ದಂತೆಯೇ ಚೀನಾ ಟಿಬೆಟ್ ನಲ್ಲಿ ಸೇನೆಯ, ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲು ಪ್ರಾರಂಭಿಸಿದ್ದು, ಸೇನಾ ತಾಲೀಮನ್ನೂ ನಡೆಸುತ್ತಿದ್ದು ಈಗ ಚೀನಾದ ವಿದೇಶಾಂಗ ಸಚಿವರು ಡೊಕ್ಲಾಮ್ ವಿವಾದಕ್ಕೆ ಭಾರತವೇ ಕಾರಣ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.