ಗುಜರಾತ್ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರಧಾನಿ ಮೋದಿಯಿಂದ ವೈಮಾನಿಕ ಸಮೀಕ್ಷೆ
ಗುಜರಾತ್ ನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವೈಮಾನಿಕ ಸಮೀಕ್ಷೆ ...

Published On :
ನವದೆಹಲಿ: ಗುಜರಾತ್ ನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.
ಇಂದು ಬೆಳಗ್ಗೆಯಷ್ಟೇ ಸಂಸತ್ ಭವನದಲ್ಲಿ ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ್ದ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು, ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹ ಪರಿಸ್ಥಿತಿಯ ಬಗ್ಗೆ ವಿವರಿಸಿದ್ದರು.
ಗುಜರಾತ್ ಮುಖ್ಯಮಂತ್ರಿಯಿಂದ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಪ್ರಧಾನಿ ಮೋದಿ ಅವರು ವೈಮಾನಿಕ ಸಮೀಕ್ಷೆ ನಡೆಸಲು ನಿರ್ಧರಿಸಿರುವುದಾಗಿ ಪ್ರಧಾನಿ ಕಾರ್ಯಾಲಯ ತಿಳಿಸಿದೆ.
ಸತತ ಮಳೆ ಹಾಗೂ ಪ್ರವಾಹದಿಂದಾಗಿ ಗುಜರಾತ್ ನ ಸುಮಾರು 20ಕ್ಕೂ ಅಧಿಕ ಹೆದ್ದಾರಿಗಳು ನೀರಿನಲ್ಲಿ ಮುಳುಗಡೆಯಾಗಿದ್ದು, ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಗುಜರಾತ್ ನ ಬಹುತೇಕ ಎಲ್ಲ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಗುಜರಾತ್ ನ ಬನಸ್ಕಾಂತ, ಸಬರ್ಕಾಂತ, ಆನಂದ್, ಪಟಾನ್ ಮತ್ತು ವಲ್ಸಾದ್ ಜಿಲ್ಲೆಗಳ ಬಹುತೇಕ ಭಾಗಗಳು ಜಲಾವೃತ್ತವಾಗಿವೆ. ಬನಸ್ಕಾಂತ ಜಿಲ್ಲೆಯೊಂದರಲ್ಲೇ ಸುಮಾರು 11 ಸಾವಿರ ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಅಲ್ಲಲ್ಲಿ ತೆರಯಲಾಗಿರುವ ಗಂಜಿ ಕೇಂದ್ರಗಳಲ್ಲಿ ನಿರಾಶ್ರಿತರಿಗೆ ಆಹಾರ ಮತ್ತು ನೀರಿನ ಪೂರೈಕೆ ಮಾಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


