ದೇಶದ 14ನೇ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್ ಪ್ರಮಾಣ ವಚನ ಸ್ವೀಕಾರ
ಬಿಹಾರದ ಮಾಜಿ ರಾಜ್ಯಪಾಲ ಬಿಜೆಪಿಯಿಂದ ರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾಗಿರುವ ಮೊದಲ ನೇತಾರ ರಾಮನಾಥ ಕೋವಿಂದ್ ಮಂಗಳವಾರ ದೇಶದ 14ನೇ ರಾಷ್ಟ್ರಪತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನವದೆಹಲಿ: ಬಿಹಾರದ ಮಾಜಿ ರಾಜ್ಯಪಾಲ ಬಿಜೆಪಿಯಿಂದ ರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾಗಿರುವ ಮೊದಲ ನೇತಾರ ರಾಮನಾಥ ಕೋವಿಂದ್ ಮಂಗಳವಾರ ದೇಶದ 14ನೇ ರಾಷ್ಟ್ರಪತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಮಂಗಳವಾರ ಮಧ್ಯಾಹ್ನ 12.15ರ ಸಮಯದಲ್ಲಿ ದೇಶದ 14ನೇ ರಾಷ್ಟ್ರಪತಿಯಾಗಿ ಕೋವಿಂದ್ ಪ್ರಮಾಣವಚನ ಸ್ವೀಕರಿಸಿದ್ದು, ಈಶ್ವರನ ಹೆಸರಲ್ಲಿ ಸಂವಿಧಾನ ಬದ್ಧ ಅಧಿಕಾರವನ್ನು ಶ್ರದ್ಧಾಪೂರ್ವಕವಾಗಿ ಮತ್ತು ನಿಷ್ಪಕ್ಷಪಾತವಾಗಿ ನಿರ್ವಹಣೆ ಮಾಡಲಿದ್ದೇನೆ ಎಂದು ರಾಮನಾಥ್ ಕೋವಿಂದ್ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣವಚನ ಸ್ವೀಕಾರದ ಬಳಿಕ ಸಂಸತ್ ಆವರಣದ ಹೊರಗೆ ರಕ್ಷಣಾ ಸಿಬ್ಬಂದಿ 21 ಸುತ್ತು ಕುಶಾಲು ತೋಪು ಸಿಡಿಸುವ ಮೂಲಕ ನೂತನ ರಾಷ್ಟ್ರಪತಿಗಳಿಗೆ ಗೌರವ ಸಲ್ಲಿಕೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


