ಪ್ರತ್ಯೇಕತಾವಾದಿಗಳಿಂದ ಪ್ರತಿಭಟನೆ ಕರೆ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ನಿರ್ಬಂಧ ಹೇರಿಕೆ
ಭಯೋತ್ಪಾದಕರಿಗೆ ಹಣಕಾಸಿನ ನೆರವು ನೀಡುತ್ತಿರುವ ಆರೋಪದಡಿಯಲ್ಲಿ ಪ್ರತ್ಯೇಕತಾವಾದಿ ನಾಯಕರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದು...

Published On :
ಶ್ರೀನಗರ: ಭಯೋತ್ಪಾದಕರಿಗೆ ಹಣಕಾಸಿನ ನೆರವು ನೀಡುತ್ತಿರುವ ಆರೋಪದಡಿಯಲ್ಲಿ ಪ್ರತ್ಯೇಕತಾವಾದಿ ನಾಯಕರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದು, ಪ್ರತ್ಯೇಕತಾವಾದಿಗಳ ಪ್ರತಿಭಟನೆಯನ್ನು ಹತ್ತಿಕ್ಕಲು ಜಮ್ಮು-ಕಾಶ್ಮೀರದಲ್ಲಿ ನಿರ್ಬಂಧ ವಿಧಿಸಲಾಗಿದೆ.
ಪ್ರತಿಭಟನೆಗೆ ಕರೆ ನೀಡಿದ್ದ ಸಯೀದ್ ಅಲಿ ಗಿಲಾನಿ ಹಾಗೂ ಮಿರ್ವಾಜಾ ಉಮರ್ ಫಾರೂಕ್ ಶ್ರೀನಗರದಲ್ಲಿ ಗೃಹ ಬಂಧನಕ್ಕೊಳಪಡಿಸಲಾಗಿದ್ದರೆ, ಯಾಸೀನ್ ಮಲ್ಲೀಕ್ ನ್ನು ಶ್ರೀನಗರದ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ. ಸೆಕ್ಷನ್ 144 ಸಿಆರ್ ಪಿಸಿ ಅಡಿಯಲ್ಲಿ ನಿರ್ಬಂಧ ವಿಧಿಸಲು ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶ ನೀಡಿದ್ದು, ರೈನಾವಾರಿ, ಖನ್ಯಾರ್, ನೌಹಟ್ಟಾ, ಎಂಆರ್ ಗಂಜ್ ಹಾಗೂ ಸಾಫಾ ಕಾದಲ್ ನಲ್ಲಿ ನಿರ್ಬಂಧ ವಿಧಿಸಲಾಗಿದೆ.
ನಿರ್ಬಂಧ ವಿಧಿಸಲಾಗಿರುವುದರಿಂದ ಸಾರ್ವಜನಿಕ ಸಾರಿಗೆ, ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿದ್ದು, ನಗರದ ಹೊರಭಾಗಗಳಲ್ಲಿ ಖಾಸಗಿ ವಾಹನ ಸಂಚಾರವಷ್ಟೇ ಕಂಡುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


