ಕಡತ ವಿಲೇವಾರಿ ವಿಳಂಬ ಮಾಡುವ ಅಧಿಕಾರಿಗಳನ್ನು ತಲೆ ಕೆಳಗಾಗಿ ನೇತುಹಾಕುವೆ: ಶಿವರಾಜ್ ಸಿಂಗ್ ಚೌಹಾಣ್
ಕಂದಾಯ ಇಲಾಖೆ ಕಡತಗಳ ವಿಲೇವಾರಿ ಮಾಡಲು ವಿಳಂಬ ಮಾಡುವ ಅಧಿಕಾರಿಗಳನ್ನು ತಲೆಕೆಳಗೆ ಮಾಡಿ ನೇತು ಹಾಕುವೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ...

Published On :
ನವದೆಹಲಿ: ಕಂದಾಯ ಇಲಾಖೆ ಕಡತಗಳ ವಿಲೇವಾರಿ ಮಾಡಲು ವಿಳಂಬ ಮಾಡುವ ಅಧಿಕಾರಿಗಳನ್ನು ತಲೆಕೆಳಗೆ ಮಾಡಿ ನೇತು ಹಾಕುವೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆ ನೀಡಿದ್ದಾರೆ.
ಭೂಪಾಲ್ ನಲ್ಲಿ ನಡೆದ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವಿವಾದವಿಲ್ಲದ ಕಂದಾಯ ವಿಷಯಗಳ ಕಡತಗಳನ್ನು ಒಂದು ತಿಂಗಳಿಗೂ ಹೆಚ್ಚು ಕಾಲ ವಿಲೇವಾರಿ ಮಾಡದೇ ಇದ್ದದ್ದು ಕಂಡು ಬಂದರೆ ಅಧಿಕಾರಿಗಳನ್ನು ತಲೆ ಕೆಳಗೆ ಮಾಡಿ ನೇತು ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಬಂದೇಲುಖಂಡದಿಂದ ಬಂದಿದ್ದ ಪಕ್ಷದ ಮುಖಂಡರು ರೆವಿನ್ಯೂ ವಿಷಯದ ಕೆಲ ಕಡತಗಳನ್ನು ಅಧಿಕಾರಿಗಳು ಬಾಕಿ ಉಳಿಸಿಕೊಂಡಿದ್ದಾರೆ, ಹೀಗಾಗಿ ಸಿಎಂ ಮದ್ಯಪ್ರವೇಶಿಸಬೇಕು ಎಂದು ಕೋರಿದ ಹಿನ್ನೆಲೆಯಲ್ಲಿ ಸಿಎಂ ಚೌಹಾಣ್ ಈ ಹೇಳಿಕೆ ನೀಡಿದ್ದಾರೆ.
ಅಧಿಕಾರಿಗಳ ವಿರುದ್ಧ ಕಠಿಣ ಪದ ಬಳಸಿರುವುದಕ್ಕೆ ಕಾಂಗ್ರೆಸ್ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದೆ. ಇದಕ್ಕೆ ಸಮರ್ಥನೆ ನೀಡಿರುವ ಬಿಜೆಪಿ ವಕ್ತಾರ ರಜನೀಶ್ ಅಗರ್ ವಾಲ್ ಮುಖ್ಯಮಂತ್ರಿಗಳು ರೈತರ ವಿಷಯದಲ್ಲಿ ಗಂಭೀರವಾದ ನಿಲುವು ತಳೆದಿದ್ದಾರೆ. ರೈತರ ಕಂದಾಯ ಕೇಸ್ ಗಳನ್ನು ಬಗೆ ಹರಿಸದೇ ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅಧಿಕಾರಿಗಳುShivraj Singh Chouhanofficialಶಿವರಾಜ್ ಸಿಂಗ್ ಚೌಹಾಣ್Madhya Pradesh Chief Ministerclearing filesಮಧ್ಯಪ್ರದೇಶ ಮುಖ್ಯಮಂತ್ರಿಕಡತ ವಿಲೇವಾರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


