ದೇಶ

ಕಾರ್ಗಿಲ್ ವಿಜಯೋತ್ಸವ: ಹುತಾತ್ಮ ಯೋಧರ ನೆನೆದು, ಭಾರತೀಯ ಸೇನೆಯನ್ನು ಕೊಂಡಾಡಿದ ಪ್ರಧಾನಿ ಮೋದಿ

ಕಾರ್ಗಿಲ್ ವಿಜಯೋತ್ಸವದ ಅಂಗವಾದ ಹಿನ್ನಲೆಯಲ್ಲಿ ಹುತಾತ್ಮ ಯೋಧರನ್ನು ನೆನೆದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತೀಯ ಸೇನೆಯನ್ನು ಬುಧವಾರ ಕೊಂಡಾಡಿದ್ದಾರೆ...

ಕಾರ್ಗಿಲ್ ವಿಜಯೋತ್ಸವ: ಹುತಾತ್ಮ ಯೋಧರ ನೆನೆದು, ಭಾರತೀಯ ಸೇನೆಯನ್ನು ಕೊಂಡಾಡಿದ ಪ್ರಧಾನಿ ಮೋದಿ
ಕಾರ್ಗಿಲ್ ವಿಜಯೋತ್ಸವ (ಸಂಗ್ರಹ ಚಿತ್ರ)
Published On :

ನವದೆಹಲಿ: ಕಾರ್ಗಿಲ್ ವಿಜಯೋತ್ಸವದ ಅಂಗವಾದ ಹಿನ್ನಲೆಯಲ್ಲಿ ಹುತಾತ್ಮ ಯೋಧರನ್ನು ನೆನೆದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತೀಯ ಸೇನೆಯನ್ನು ಬುಧವಾರ ಕೊಂಡಾಡಿದ್ದಾರೆ. 

ಕಾರ್ಗಿಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಕಾರ್ಗಿಲ್ ವಿಜಯೋತ್ಸವ ದಿನ ಭಾರತೀಯ ಸೇನೆಯ ಪರಾಕ್ರಮ ಹಾಗೂ ಭಾರತವನ್ನು ರಕ್ಷಣೆ ಮಾಡುವ ಸಲುವಾಗಿ ಅವರ ಶ್ರೇಷ್ಟ ತ್ಯಾಗ ಹಾಗೂ ಬಲಿದಾನಗಳನ್ನು ನೆನಪಿಸುತ್ತದೆ ಎಂದು ಹೇಳಿದ್ದಾರೆ. 

ಯುದ್ಧದ ಸಂದರ್ಭದಲ್ಲಿ ದೇಶದ ಹೆಮ್ಮೆ ಮತ್ತು ನಾಗರಿಕರ ಭದ್ರತೆಗಾಗಿ ಕೆಚ್ಚೆದೆಯಿಂದ ವೀರತ್ವದಿಂದ ಹೋರಾಡಿದ ನಮ್ಮ ಕೆಚ್ಚೆದೆ ಯೋಧರನ್ನು ಇಂದು ನಾವು ನೆನಪಿಸಿಕೊಳ್ಳುತ್ತಿದ್ದೇವೆಂದು ತಿಳಿಸಿದ್ದಾರೆ. 

ಪಾಕಿಸ್ತಾನ ವಿರುದ್ಧ 1999ರಲ್ಲಿ ಭಾರತ ಜಯಗಳಿಸಿದ ಐತಿಹಾಸಿಕ ದಿನವಾಗಿದ್ದು, ಕಾರ್ಗಿಲ್ ಯುದ್ಧ ನಡೆದು ಇಂದಿಗೆ 18 ವರ್ಷಗಳು ಗತಿಸಿವೆ. ಹಿಮಾಲಯದ ಕೊರೆಯುವ ಚಳಿಯಲ್ಲಿ 1999ರ ಮೇಯಿಂದ ಜು.26 ರವರೆಗೆ ನಡೆದಿದ್ದ ಈ ಕದನದಲ್ಲಿ ಕರ್ನಾಟಕದ 15 ಯೋಧರೂ ಸೇರಿದಂದೆ ಭಾರತೀಯ ಸೈನ್ಯದ ಸುಮಾರು 527 ಮಂದಿ ವೀರಮರಣನ್ನಪ್ಪಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.