ಕಾರ್ಗಿಲ್ ವಿಜಯೋತ್ಸವ ದಿನ: ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ ಜೇಟ್ಲಿ
1999ರಲ್ಲಿ ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧದಲ್ಲಿ ಐತಿಹಾಸಿಕ ಗೆಲವು ಸಾಧಿಸಿರುವ ಸ್ಮರಣಾರ್ಥವಾಗಿ ದೇಶದಾದ್ಯಂತ ಕಾರ್ಗಿಲ್ ವಿಜಯೋತ್ಸವ ದಿನವನ್ನು ಆಚರಿಸಲಾಗುತ್ತಿದ್ದು, ಹುತಾತ್ಮ ವೀರ ಯೋಧರಿಗೆ ರಕ್ಷಣಾ ಸಚಿವ ಅರುಣ್ ಜೇಟ್ಲಿಯವರು...

Published On :
ನವದೆಹಲಿ: 1999ರಲ್ಲಿ ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧದಲ್ಲಿ ಐತಿಹಾಸಿಕ ಗೆಲವು ಸಾಧಿಸಿರುವ ಸ್ಮರಣಾರ್ಥವಾಗಿ ದೇಶದಾದ್ಯಂತ ಕಾರ್ಗಿಲ್ ವಿಜಯೋತ್ಸವ ದಿನವನ್ನು ಆಚರಿಸಲಾಗುತ್ತಿದ್ದು, ಹುತಾತ್ಮ ವೀರ ಯೋಧರಿಗೆ ರಕ್ಷಣಾ ಸಚಿವ ಅರುಣ್ ಜೇಟ್ಲಿಯವರು ಬುಧವಾರ ಗೌರವ ಸಲ್ಲಿಸಿದರು.
ರಾಜಧಾನಿಯ ದೆಹಲಿಯ ಇಂಡಿಯಾ ಗೇಟ್ ನಲ್ಲಿರುವ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ರಕ್ಷಣಾ ಸಚಿವ ಅರುಣ್ ಜೇಟ್ಲಿ, ಸೇನಾ ಮುಖ್ಯಸ್ಥ ಬಿಪಿನ್ ರಾವತ್, ವಾಯುಪಡೆ ಮುಖ್ಯಸ್ಥ ಮಾರ್ಷಲ್ ಬಿರೇಂದರ್ ಸಿಂಗ್ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಾನ್ಬಾ ಗೌರವ ಅರ್ಪಿಸಿದರು.
ಕಾರ್ಗಿಲ್ ವಿಜಯೋತ್ಸವ ದಿನ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರೂ ಕೂಡ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಭಾರತೀಯ ಸೇನೆಯನ್ನು ಕೊಂಡಾಡಿದ್ದಾರೆ.
1996 ಜುಲೈ 26 ರಂದು ಭಾರತೀಯ ಸೇನೆ ಜಮ್ಮು ಮತ್ತು ಕಾಶ್ಮೀರದ ಲಡಾಕ್ ಪ್ರಾಂತ್ಯ ಸೇರಿದಂತೆ ಹಿಮಾಲಯ ಪ್ರದೇಶದಲ್ಲಿ ಸುಮಾರು ಅರವತ್ತು ದಿನಗಳ ಕಾಲ ಪಾಕಿಸ್ತಾನ ಸೇನೆಯ ವಿರುದ್ಧ ಕೆಚ್ಚೆದೆಯ ಹೋರಾಟ ಮಾಡಿ ಐತಿಹಾಸಿಕ ಗೆಲವು ಸಾಧಿಸಿತ್ತು. ಈ ಹಿನ್ನಲೆಯಲ್ಲಿ ಜುಲೈ.26ರಂದು ಕಾರ್ಗಿಲ್ ವಿಜಯ್ ದಿವತ್ ಎಂದು ದೇಶದಾದ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Arun Jaitleyಅರುಣ್ ಜೇಟ್ಲಿModiIndian ArmyPakistanಪಾಕಿಸ್ತಾನಭಾರತೀಯ ಸೇನೆಮೋದಿKargil Vijay Diwasಕಾರ್ಗಿಲ್ ವಿಜಯೋತ್ಸವ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


