ದೇಶ

ಮುಂಬೈ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 17ಕ್ಕೆ ಏರಿಕೆ, ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಮುಂಬೈ ಬಹುಮಹಡಿ ಕಟ್ಟಡ ಕುಸಿತು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿರುವುದಾಗಿ ಬುಧವಾರ ತಿಳಿದುಬಂದಿದೆ...

ಮುಂಬೈ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 17ಕ್ಕೆ ಏರಿಕೆ, ಮುಂದುವರೆದ ರಕ್ಷಣಾ ಕಾರ್ಯಾಚರಣೆ
ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು
Published On :
ಮುಂಬೈ; ಮುಂಬೈ ಬಹುಮಹಡಿ ಕಟ್ಟಡ ಕುಸಿತು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿರುವುದಾಗಿ ಬುಧವಾರ ತಿಳಿದುಬಂದಿದೆ. 
ನಿನ್ನೆಯಷ್ಟೇ 4 ಅಂತಸ್ತಿನ ಕಟ್ಟಡವೊಂದು ಮುಂಬೈನ ಫಾಟ್ಕೋಪರ್ ಪ್ರದೇಶದಲ್ಲಿ ಕುಸಿದುಬಿದ್ದಿತ್ತು. ಕಟ್ಟಡ ಕುಸಿದು ಬಿದ್ದ ಪರಿಣಾಮ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿ ಹಾಕಿಕೊಂಡಿದ್ದರು. ಈ ವರೆಗೂ 17 ಮಂದಿ ಮೃತಪಟ್ಟಿರುವುದ್ದಾರೆಂದು ವರದಿಗಳು ತಿಳಿಸಿವೆ. 
ಅವಶೇಷಗಳ ಅಡಿಯಲ್ಲಿ ಮತ್ತಷ್ಟು ಮಂದಿ ಸಿಲುಕಿರುವ ಸಾಧ್ಯತೆ ಇದ್ದು, ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಕಟ್ಟಡದ ಕೆಳಗಿನ ಅಂತಸ್ತಿನಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಡೆಸಲಾಗುತ್ತಿತ್ತು. ಇದೇ ಕಟ್ಟಡ ಕುಸಿದು ಬೀಳಲು ಕಾರಣ ಇರಬಹುದು ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.