ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ನಿತೀಶ್ ನಾಳೆ ಸಿಎಂ ಆಗಿ ಪ್ರಮಾಣ ವಚನ!
ದೇಶದ ಇತಿಹಾಸದಲ್ಲೇ ಮೊದಲು ಎಂಬಂತೆ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗುರುವಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

Published On :
ಪಾಟ್ನಾ: ದೇಶದ ಇತಿಹಾಸದಲ್ಲೇ ಮೊದಲು ಎಂಬಂತೆ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗುರುವಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಒಂದು ತಿಂಗಳಿನಿಂದ ಜೆಡಿಯು, ಆರ್ ಜೆಡಿ ನಡುವೆ ನಡೆಯುತ್ತಿದ್ದ ಶೀತಲ ಸಮರಕ್ಕೆ ಕೊನೆಗೂ ಸಿಎಂ ನಿತೀಶ್ ಕುಮಾರ್ ಮಂಗಳ ಹಾಡಿದ್ದು, ಜೆಡಿಯು, ಆರ್ ಜೆಡಿ ಮೈತ್ರಿಕೂಟದಿಂದ ಹೊರಬಂದು ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅಂತೆಯೇ ತಮ್ಮ ಹಳೆಯ ಮಿತ್ರ ಬಿಜೆಪಿಯೊಂದಿಗೆ ಸೇರಿ ಮತ್ತೆ ಬಿಹಾರದ ಸಿಎಂ ಆಗಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಈಗಾಗಲೇ ಬಿಜೆಪಿ ಪಕ್ಷ ನಿತೀಶ್ ಕುಮಾರ್ ಅವರಿಗೆ ಬೆಂಬಲ ಸೂಚಿಸಿ ಫ್ಯಾಕ್ಸ್ ಮೂಲಕ ಬಿಹಾರ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ಅವರಿಗೆ ರವಾನಿಸಿದೆ ಎಂದು ತಿಳಿದುಬಂದಿದೆ.
ಹೀಗಾಗಿ ನಾಳೆಯೇ ಪಾಟ್ನಾದಲ್ಲಿ ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರು ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಜೆಡಿಯು ಮೂಲಗಳ ಪ್ರಕಾರ ನಾಳೆ ಸಂಜೆ 5 ಗಂಟೆಗೆ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಲಿದ್ದು, ಬಿಜೆಪಿಯ ಸುಶೀಲ್ ಕುಮಾರ್ ಮೋದಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯಪಾಲರಿಗೆ ಅನಾರೋಗ್ಯ, ಪ್ರಮಾಣ ವಚನದ ಮೇಲೆ ಕರಿನೆರಳು
ಏತನ್ಮಧ್ಯೆ ಬಿಹಾರ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ನಾಳೆ ನಿತೀಶ್ ಪ್ರಮಾಣ ವಚನಕ್ಕೆ ರಾಜ್ಯಪಾಲರು ಆಗಮಿಸುತ್ತಾರೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


