ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ: ಹಿರಿಯ ಪತ್ರಕರ್ತ ಅಮಲ್ ವಿಷ್ಣುದಾಸ್ ಬಂಧನ
ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಲಯಾಳಂನ ಮಾತೃಭೂಮಿ ಚಾನಲ್ ನ ಹಿರಿಯ ಸುದ್ದಿ ಸಂಪಾದಕ ಮತ್ತು ಆ್ಯಂಕರ್ ಆಗಿರುವ ಅಮಲ್...

Published On :
ತಿರುವನಂತಪುರಂ: ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಲಯಾಳಂನ ಮಾತೃಭೂಮಿ ಚಾನಲ್ ನ ಹಿರಿಯ ಸುದ್ದಿ ಸಂಪಾದಕ ಮತ್ತು ಆ್ಯಂಕರ್ ಆಗಿರುವ ಅಮಲ್ ವಿಷ್ಣುದಾಸ್ ಅವರನ್ನು ಕಳೆದ ರಾತ್ರಿ ಪೊಲೀಸರು ಬಂಧಿಸಿದ್ದಾರೆ.
ಮಹಿಳಾ ಪತ್ರಕರ್ತೆಯೊಬ್ಬರು ಅಮಲ್ ವಿಷ್ಣುದಾಸ್ ಅವರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ ಅಮಲ್ ವಿರುದ್ಧ ಅತ್ಯಾಚಾರ, ಮೋಸ ಮತ್ತು ಬೆದರಿಕೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ಅಮಲ್ ವಿಷ್ಣುದಾಸ್ ಅವರನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದು ಚಾನಲ್ ನ ಆಡಳಿತ ಮಂಡಳಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಲೈಂಗಿಕ ಕಿರುಕುಳThiruvananthapuramJournalistಪತ್ರಕರ್ತತಿರುವನಂತಪುರಂsexual exploitationAmal Vishnudasಅಮಲ್ ವಿಷ್ಣುದಾಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


