ತೇಜಸ್ವಿ ರಾಜೀನಾಮೆ ನೀಡುವುದಿಲ್ಲ, ನಿತೀಶ್ ರಾಜೀನಾಮೆ ಕೇಳಿಲ್ಲ: ಲಾಲು ಪ್ರಸಾದ್ ಯಾದವ್
ಬಿಹಾರ ಉಪಮುಖ್ಯಮಂತ್ರಿ ಸ್ಥಾನಕ್ಕೆ ತೇಜಸ್ವಿ ಯಾದವ್ ರಾಜೀನಾಮೆ ನೀಡುವುದಿಲ್ಲ ಎಂದು ಆರ್ ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.

Published On :
ನವದೆಹಲಿ: ಬಿಹಾರ ಉಪಮುಖ್ಯಮಂತ್ರಿ ಸ್ಥಾನಕ್ಕೆ ತೇಜಸ್ವಿ ಯಾದವ್ ರಾಜೀನಾಮೆ ನೀಡುವುದಿಲ್ಲ ಎಂದು ಆರ್ ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.
ಸಿಎಂ ನಿತೀಶ್ ಕುಮಾರ್ ತೇಜಸ್ವಿ ಯಾದವ್ ಅವರ ರಾಜೀನಾಮೆಯನ್ನು ಕೇಳಿಲ್ಲ. ತೇಜಸ್ವಿ ಯಾದವ್ ರಾಜೀನಾಮೆಯನ್ನು ನೀಡುವುದೂ ಇಲ್ಲ ಎಂದಿರುವ ಲಾಲು ಪ್ರಸಾದ್ ಯಾದವ್, ನಿತೀಶ್ ಕುಮಾರ್ ಅವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದ್ದಾರೆ.
ಭ್ರಷ್ಟಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಚಾರ್ಜ್ ಶೀಟ್ ನಲ್ಲಿ ಲಾಲು ಪ್ರಸಾದ್ ಯಾದವ್ ಅವರ ಹೆಸರಿನೊಂದಿಗೆ ತೇಜಸ್ವಿ ಯಾದವ್ ಹೆಸರೂ ಇದ್ದು, ತೇಜಸ್ವಿ ಯಾದವ್ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಲಾಲು ಪ್ರಸಾದ್ ಯಾದವ್ ತೇಜಸ್ವಿ ಯಾದವ್ ರಾಜೀನಾಮೆ ನೀಡುವುದಿಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Resignationಲಾಲು ಪ್ರಸಾದ್ ಯಾದವ್Lalu Prasadತೇಜಸ್ವಿ ಯಾದವ್Tejashwi YadavBihar Political Crisisಬಿಹಾರ ರಾಜಕೀಯ ಬಿಕ್ಕಟ್ಟು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


