ದೇಶದಲ್ಲಿ ಪ್ರತಿ ವರ್ಷ 5 ಲಕ್ಷ ರಸ್ತೆ ಅಪಘಾತ, 1.50 ಲಕ್ಷ ಜನ ಸಾವು: ನಿತಿನ್ ಗಡ್ಕರಿ
ದೇಶದಲ್ಲಿ ಪ್ರತಿ ವರ್ಷ ಐದು ಲಕ್ಷ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಈ ಅಪಘಾತಗಳಲ್ಲಿ ಪ್ರತಿ ವರ್ಷ 1.50 ಲಕ್ಷ ಜನ ಪ್ರಾಣ....

Published On :
ನವದೆಹಲಿ: ದೇಶದಲ್ಲಿ ಪ್ರತಿ ವರ್ಷ ಐದು ಲಕ್ಷ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಈ ಅಪಘಾತಗಳಲ್ಲಿ ಪ್ರತಿ ವರ್ಷ 1.50 ಲಕ್ಷ ಜನ ಪ್ರಾಣ ಕಳೆದುಕೊಳ್ಳುತ್ತಿರುವ ಆಘಾತಕಾರಿ ಮಾಹಿತಿಯನ್ನು ಗುರುವಾರ ಲೋಕಸಭೆಗೆ ತಿಳಿಸಲಾಗಿದೆ.
ರಸ್ತೆ ಅಪಘಾತಗಳ ಪ್ರಮಾಣ ಕಳೆದ ಮೂರು ವರ್ಷಗಳಲ್ಲಿ ಶೇ.4ರಷ್ಟು ಹೆಚ್ಚಳವಾಗಿದೆ. ಅದೇ ವೇಳೆ ದೇಶದಲ್ಲಿನ ಮೋಟಾರು ವಾಹನ ಉದ್ದಿಮೆಯು ಶೇ.22ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಇಂದು ಲೋಕಸಭೆಗೆ ತಿಳಿಸಿದ್ದಾರೆ.
ದೇಶದಲ್ಲಿ ಸುಮಾರು ಶೇ.30ರಷ್ಟು ಬೋಗಸ್ ಲೈಸನ್ಸ್‌ಗಳು ಚಾಲ್ತಿಯಲ್ಲಿವೆ ಎಂದು ಗಡ್ಕರಿ ಹೇಳಿದ್ದಾರೆ.
ಇದೇ ಮೊದಲ ಬಾರಿಗೆ ನಮ್ಮ ಸಚಿವಾಲಯ ಸೇತುವೆಗಳ ಸಮೀಕ್ಷೆ ನಡೆಸಿದ್ದು, ದೇಶದಲ್ಲಿ 1.62 ಲಕ್ಷ ಸೇತುವೆಗಳಿವೆ; ಇವುಗಳಲ್ಲಿ 1,26,233 ಮೋರಿಗಳು ಸೇರಿವೆ; 147 ಸೇತುವೆಗಳು ಅಪಾಯಕಾರಿ ಸ್ಥಿತಿಯಲ್ಲಿವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


