ಬಿಹಾರ ಜನತೆಗೆ ನಿತೀಶ್ ಹೇಗೆ ಮುಖ ತೋರಿಸುತ್ತಾರೆ?: ಲಾಲೂ ಪ್ರಸಾದ್ ಯಾದವ್
ಬಿಜೆಪಿಗೆ ಮತ್ತೆ ಸೇರ್ಪಡೆಗೊಳ್ಳುವುದಿಲ್ಲ ಎಂದು ಹೇಳಿ ಅಧಿಕಾರ ಸ್ವೀಕಾರ ಮಾಡಿದ್ದ ನಿತೀಶ್ ಕುಮಾರ್ ಅವರು ಇದೀಗ ಬಿಹಾರ ಜನತೆಗೆ ಹೇಗೆ ಮುಖ ತೋರಿಸುತ್ತಾರೆ ಎಂದು ರಾಷ್ಟ್ರೀಯ ಜನತಾ ದಳ...

Published On :
ಪಾಟ್ನ: ಬಿಜೆಪಿಗೆ ಮತ್ತೆ ಸೇರ್ಪಡೆಗೊಳ್ಳುವುದಿಲ್ಲ ಎಂದು ಹೇಳಿ ಅಧಿಕಾರ ಸ್ವೀಕಾರ ಮಾಡಿದ್ದ ನಿತೀಶ್ ಕುಮಾರ್ ಅವರು ಇದೀಗ ಬಿಹಾರ ಜನತೆಗೆ ಹೇಗೆ ಮುಖ ತೋರಿಸುತ್ತಾರೆ ಎಂದು ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ಗುರುವಾರ ಪ್ರಶ್ನೆ ಮಾಡಿದ್ದಾರೆ.
ಮೇವು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಲಾಲೂ ಪ್ರಸಾದ್ ಯಾದವ್ ಅವರು ರಾಂಚಿಗೆ ತೆರಳಿದ್ದಾರೆ. ಆರ್ ಜೆಡಿ ಜೊತೆ ಮೈತ್ರಿ ಕಡಿದುಕೊಂಡು ಬಿಜೆಪಿ ಜೊತೆ ಸೇರಿ ಬಿಹಾರದಲ್ಲಿ ನಿತೀಶ್ ಕುಮಾರ್ ಅವರು ಸರ್ಕಾರ ರಚನೆ ಮಾಡಿರುವ ಹಿನ್ನಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾನು ತತ್ವಗಳನ್ನೊಳಗೊಂಡಿರುವ ಮನುಷ್ಯನಾಗಿದ್ದೇನೆ. ಈ ಹಿಂದೆ ಅಧಿಕಾರ ಸ್ವೀಕರಿಸುವಾಗ ನಿತೀಶ್ ಕುಮಾರ್ ಅವರು ಮತ್ತೆ ಬಿಜೆಪಿಗೆ ಸೇರ್ಪಡೆಗೊಳ್ಳುವುದಿಲ್ಲ ಎಂದು ಹೇಳಿದ್ದರು. ಇದೀಗ ಬಿಜೆಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಬಿಹಾರ ಜನತೆಗೆ ಹೇಗೆ ಮುಖ ತೋರಿಸುತ್ತಾರೆಂದು ಕೇಳಿದ್ದಾರೆ.
ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ನಿತೀಶ್ ಅವರು ಬಿಹಾರ ರಾಜ್ಯದ ಜನತೆಗೆ ಹಾಗೂ ನಮಗೆ ದ್ರೋಹ ಮಾಡಿದ್ದಾರೆ. 2019ರ ಚುನಾವಣೆ ವೇಳೆ ತೇಜಸ್ವಿ ಪ್ರಬಲ ಎದುರಾಳಿಯಾಗಲಿದ್ದಾರೆಂಬುದನ್ನು ಅರಿತ ಬಿಜೆಪಿ, . ತೇಜಸ್ವಿ ವಿರುದ್ಧ ಬಿಜೆಪಿ ಷಡ್ಯಂತ್ರ ರೂಪಿಸಿದೆ. ಪ್ರಸ್ತುತದ ಎಲ್ಲಾ ಬೆಳವಣಿಗೆಗಳಿಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪಿತೂರಿಯೇ ಕಾರಣ ಎಂದು ತಿಳಿಸಿದ್ದಾರೆ.
ಕಳೆದ 15-20 ವರ್ಷಗಳಿಂದ ನಾನು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಿದ್ದೇನೆ. ತರಾತುರಿಯಲ್ಲಿ ನನಗೆ ಶಿಕ್ಷೆಯನ್ನು ನೀಡಲಾಯಿತು. ಬಿಜೆಪಿ ಜೊತೆಗೆ ಕೈಜೋಡಿಸಿ ನಿತೀಶ್ ಕುಮಾರ್ ಅವರು ನನ್ನ ವಿರುದ್ಧ ಪಿತೂರಿ ನಡೆಸಿದ್ದಾರೆ. ನಿತೀಶ್ ಕುಮಾರ್ ಒಬ್ಬ ದೊಡ್ಡ ಅವಕಾಶವಾದಿ.
ಮಣ್ಣಿನಲ್ಲಿ ಮಣ್ಣಾದರೂ ಬಿಜೆಪಿ ಜೊತೆಗೆ ಕೈಜೋಡಿಸುವುದಿಲ್ಲ ಎಂದು ನಿತೀಶ್ ಹೇಳಿದ್ದರು. ಅಧಿಕಾರಕ್ಕೇರುವ ಸಂದರ್ಭದಲ್ಲಿ ರಾಜ್ಯದಲ್ಲಿ ಅಧಿಕಾರ ನಡೆಸುವಂತೆ ತಿಳಿಸಿ ನಿತೀಶ್ ಅವರ ಹಣೆಗೆ ತಿಲಕವನ್ನು ಇಟ್ಟಿದ್ದೆ. ನನ್ನ ಹೃದಯದಲ್ಲಿ ಯಾವ ದುರಾಸೆಯೂ ಇರಲಿಲ್ಲ. ಆ ರೀತಿ ಇದ್ದಿದ್ದೇ ಆಗಿದ್ದರೆ, ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಏಕೆ ಘೋಷಣೆ ಮಾಡುತ್ತಿದ್ದೆ. ಪ್ರಸ್ತುತ ಬಿಹಾರದಲ್ಲಿ ನಡೆದಿರುವ ಬೆಳವಣಿಗೆಗಳು ಪೂರ್ವಯೋಜಿತವಾದದ್ದು. ನಿತೀಶ್ ಅವರಿಗೆ ನಾನು ಯಾವ ತೊಂದರೆಗಳನ್ನು ನೀಡಿರಲಿಲ್ಲ. ಹಲವು ಸಂದರ್ಭಗಳಲ್ಲಿ ನಿತೀಶ್ ಅವರು ಮೋದಿಯವರನ್ನು ಭೇಟಿ ಮಾಡಿ, ಭೋಜನಕೂಟದಲ್ಲಿ ಭಾಗಿಯಾಗಿದ್ದರು. ಈ ಎಲ್ಲಾ ಬೆಳವಣಿಗೆಗಳನ್ನು ನೋಡಿದರೆ, ಇವೆಲ್ಲಾ ಪೂರ್ವಯೋಜಿತವಾದದ್ದು ಎಂಬುದು ತಿಳಿದುಬರುತ್ತದೆ.
ಕೆಲ ಮಾಧ್ಯಮಗಳನ್ನು ನಾವು ಉತ್ತಮ ಮಾಧ್ಯಮಗಳೆಂದು ಪರಿಗಣಿಸುತ್ತೇವೆ. ಕೆಲ ಮಾಧ್ಯಮಗಳು ಸುಪಾರಿಗಳನ್ನು ತೆಗೆದುಕೊಂಡು ಸುದ್ದಿ ಮಾಡುತ್ತವೆ. ಟ್ರಂಪ್ ವಿರುದ್ಧ ಅಮೆರಿಕದಲ್ಲಿ ಮಾಧ್ಯಮಗಳು ಯಾವ ರೀತಿ ಹೋರಾಟ ಮಾಡುತ್ತಿವೆ ಎಂಬುದನ್ನು ನಾವು ನೋಡಬಹುದು. ಆದರೆ ಇಲ್ಲಿನ ಮಾಧ್ಯಮಗಳು ವಿರೋಧ ಪಕ್ಷಗಳ ವಿರುದ್ಧವೇ ಹೋರಾಟ ಮಾಡುತ್ತವೆ.
ಅಮಿತ್ ಶಾ ಅವರು ಅತ್ಯುತ್ತಮ ಸಂಪಾದಕ. ಸುದ್ದಿ ಹೇಗಿರಬೇಕೆಂಬುದನ್ನು ಶಾ ಅವರೇ ನಿರ್ಧರಿಸಿ, ಮಾಧ್ಯಮಗಳ ಮಾಲೀಕರಿಗೆ, ಸಂಪಾದಕರಿಗೆ ತಿಳಿಸುತ್ತದೆ. ಇದರಲ್ಲಿ ಪತ್ರಕರ್ತರ ಯಾವ ತಪ್ಪೂ ಇಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


