ದೇಶ

ಹಸುವಿನೊಂದಿಗೆ ಸೆಕ್ಸ್: ಮಹಾರಾಷ್ಟ್ರದಲ್ಲಿ ವ್ಯಕ್ತಿಯ ಬಂಧನ, ಪ್ರಕರಣ ದಾಖಲು

ಹಸುವಿನೊಂದಿಗೆ ಅಸಹಜ ಸೆಕ್ಸ್ ನಡೆಸಿದ ಆರೋಪದ ಮೇಲೆ ಮಹಾರಾಷ್ಟ್ರದಲ್ಲಿ ವ್ಯಕ್ತಿಯೊರ್ವನನ್ನು ಪೊಲೀಸರು ಬಂಧಿಸಿದ್ದಾರೆ...

ಹಸುವಿನೊಂದಿಗೆ ಸೆಕ್ಸ್: ಮಹಾರಾಷ್ಟ್ರದಲ್ಲಿ ವ್ಯಕ್ತಿಯ ಬಂಧನ, ಪ್ರಕರಣ ದಾಖಲು
ಹಸು
Published On :
ಮುಂಬೈ: ಹಸುವಿನೊಂದಿಗೆ ಅಸಹಜ ಸೆಕ್ಸ್ ನಡೆಸಿದ ಆರೋಪದ ಮೇಲೆ ಮಹಾರಾಷ್ಟ್ರದಲ್ಲಿ ವ್ಯಕ್ತಿಯೊರ್ವನನ್ನು ಪೊಲೀಸರು ಬಂಧಿಸಿದ್ದಾರೆ. 
ಅಹಮ್ಮದನಗರ ಜಿಲ್ಲೆಯ ಕೊಪೇರ್ಗಾನ್ ನಲ್ಲಿ ಈ ಆಘಾತಕಾರಿ ಘಟನೆ ನಡೆಸಿದ್ದು ಆರೋಪಿ 35 ವರ್ಷದ ಶ್ರವಣ್ ನನ್ನು ಬಂಧಿಸಲಾಗಿದ್ದು ಆತನ ವಿರುದ್ಧ ಸೆಕ್ಷನ್ 377(ಅಸ್ವಾಭಾವಿಕ ಲೈಂಗಿಕತೆ)ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಸುವಿನ ಮಾಲೀಕ ದೌಲತ್ ಜಗಜ್ಹಾಪ್ ಶ್ರವಣ್ ವಿರುದ್ಧ ದೂರು ನೀಡಿದ್ದು ಈ ದೂರಿನನ್ವಯ ಪೊಲೀಸರು ಶ್ರವಣ್ ನನ್ನು ಕಳೆದ ರಾತ್ರಿ ಬಂಧಿಸಿದ್ದಾರೆ. 
ಹಸುವಿನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುತ್ತಿದ್ದಾಗ ದೌಲತ್ ಜಗಜ್ಹಾಪ್ ಮತ್ತು ಗ್ರಾಮಸ್ಥರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆತನ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು ಬುಧವಾರ ಕೋರ್ಟ್ ಗೆ ಮುಂದೆ ಹಾಜರುಪಡಿಸಿದ್ದು ನ್ಯಾಯಾಧೀಶರು ಎರಡು ದಿನ ಪೊಲೀಸರ ವಶಕ್ಕೆ ಆದೇಶಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.