ನಿತೀಶ್ ನಿರ್ಧಾರಕ್ಕೆ ತಮ್ಮ ಬೆಂಬಲವಿಲ್ಲ, ಸೂಕ್ತ ಸಂದರ್ಭದಲ್ಲಿ ಪ್ರಶ್ನಿಸುತ್ತೇನೆ: ಜೆಡಿಯು ಸಂಸದ ಅಲಿ ಅನ್ವರ್
ಕ್ಷಿಪ್ರ ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗಿದ್ದ ಬಿಹಾರದಲ್ಲಿ ಇದೀಗ ಬಿಜೆಪಿ-ಜೆಡಿಯು ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಜೆಡಿಯು ಸಂಸದರೊಬ್ಬರು ನಿತೀಶ್ ಕುಮಾರ್ ನಿರ್ಧಾರವನ್ನು ಬಹಿರಂಗವಾಗಿಯೇ ವಿರೋಧಿಸಿದ್ದಾರೆ.

ಪಾಟ್ನಾ: ಕ್ಷಿಪ್ರ ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗಿದ್ದ ಬಿಹಾರದಲ್ಲಿ ಇದೀಗ ಬಿಜೆಪಿ-ಜೆಡಿಯು ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಜೆಡಿಯು ಸಂಸದರೊಬ್ಬರು ನಿತೀಶ್ ಕುಮಾರ್ ನಿರ್ಧಾರವನ್ನು ಬಹಿರಂಗವಾಗಿಯೇ ವಿರೋಧಿಸಿದ್ದಾರೆ.
ಎನ್‌ಡಿಎ ಸೇರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿರ್ಧಾರಕ್ಕೆ ಜೆಡಿ(ಯು) ಪಕ್ಷದೊಳಗಡೆಯೇ ಕೆಲವರಿಂದ ವಿರೋಧ ವ್ಯಕ್ತವಾಗಿದ್ದು, ಜೆಡಿಯು ಪಕ್ಷದ ರಾಜ್ಯಸಭೆ ಸದಸ್ಯ ಅಲಿ ಅನ್ವರ್ ಅವರು ನಿತೀಶ್ ಕುಮಾರ್ ನಿರ್ಧಾರವನ್ನು ವಿರೋಧಿಸಿದ್ದಾರೆ. ನಿತೀಶ್ ಅವರ ನಿರ್ಧಾರವನ್ನು ಬೆಂಬಲಿಸುವುದಿಲ್ಲ ಎಂದು ಅವರು, ಅವಕಾಶ ದೊರೆತರೆ ಈ ಕುರಿತು ಪಕ್ಷದ ನಾಯಕರ ಜತೆ ಚರ್ಚಿಸಲು ಸಿದ್ಧವಿರುವುದಾಗಿ ಅವರು ಹೇಳಿದ್ದಾರೆ.
ಇದೇ ವೇಳೆ ಬಿಜೆಪಿ ಕುರಿತು ಕಿಡಿಕಾರಿರುವ ಅನ್ವರ್ ಅಲಿ ಅವರು, ಈ ಹಿಂದೆ ನಾವು ಯಾವ ಕಾರಣಗಳಿಂದಾಗ ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡಿದ್ದೆವೋ ಇಂದಿಗೂ ಬಿಜೆಪಿಯಲ್ಲಿ ಅದೇ ಪರಿಸ್ಥಿತಿ ಮುಂದುವರೆದಿದೆ. ಹೀಗಾಗಿ ನಿತೀಶ್ ಕುಮಾರ್ ಅವರ ನಿರ್ಧಾರ ಸರಿಯಲ್ಲ. ಮುಂದಿನ ದಿನಗಳಲ್ಲಿ ಪಕ್ಷದ ಸಭೆಯಲ್ಲಿ ತಮಗೆ ಅವಕಾಶ ದೊರೆತರೆ ಖಂಡಿತಾ ಈ ಬಗ್ಗೆ ಪ್ರಶ್ನಿಸುತ್ತೇನೆ ಎಂದು ಹೇಳಿದ್ದಾರೆ.
ಪ್ರತಿಕ್ರಿಯೆಗೆ ಶರದ್ ಯಾದವ್ ನಕಾರಾ
ಏತನ್ಮಧ್ಯೆ ನಿತೀಶ್ ಕುಮಾರ್ ಅವರ ಈ ದಿಢೀರ್ ನಿರ್ಧಾರಕ್ಕೆ ಸಂಬಂಧಿಸಿದಂತೆ ಜೆಡಿಯು ಮುಖ್ಯಸ್ಥ ಶರದ್ ಯಾದವ್ ನಿರಾಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


