ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣ ವಚನ ಸ್ವೀಕಾರ
ನಿರೀಕ್ಷೆಯಂತೆಯೇ ಜೆಡಿಯು ಸಖ್ಯ ತೊರೆದಿದ್ದ ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರು ಬಿಹಾರದ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಅವರೊಂದಿಗೆ ಬಿಜೆಪಿ ಸುಶೀಲ್ ಕುಮಾರ್ ಮೋದಿ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪಾಟ್ನಾ: ನಿರೀಕ್ಷೆಯಂತೆಯೇ ಜೆಡಿಯು ಸಖ್ಯ ತೊರೆದಿದ್ದ ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರು ಬಿಹಾರದ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಅವರೊಂದಿಗೆ ಬಿಜೆಪಿ ಸುಶೀಲ್ ಕುಮಾರ್ ಮೋದಿ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಆರ್ ಜೆಡಿ ಸ್ನೇಹದಿಂದ ಹೊರ ಬಂದಿ ನಿತೀಶ್ ಕುಮಾರ್ ಅವರಿಗೆ ಬಿಜೆಪಿ ಬೆಂಬಲ ನೀಡಿದ್ದರಿಂದ ಸರ್ಕಾರ ರಚನೆಗೆ ಬಿಹಾರ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರು ಆಹ್ವಾನಿಸಿದ್ದರು. ಅದರಂತೆ ಇಂದು ಬೆಳಗ್ಗೆ 10 ಗಂಟೆಗೆ ಪಾಟ್ನಾದ ರಾಜಭವನಕ್ಕೆ ಆಗಮಿಸಿದ ನಿತೀಶ್ ಕುಮಾರ್ ಅವರು, ಹಾಗೂ ಬಿಜೆಪಿಯ ಸುಶೀಲ್ ಕುಮಾರ್ ಮೋದಿ ಅವರು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ನಿತೀಶ್ ಕುಮಾರ್ 6ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ಬಿಹಾರ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರು ಉಭಯ ಮುಖಂಡರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಈ ವೇಳೆ ಬಿಜೆಪಿ ಹಾಗೂ ಜೆಡಿಯುನ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


