"ಮಿಸೈಲ್ ಮ್ಯಾನ್" ಅಬ್ದುಲ್ ಕಲಾಂ ಸ್ಮಾರಕ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ
ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಶಸ್ತಿ ಪುರಸ್ಕೃತ, 'ಮಿಸೈಲ್ ಮ್ಯಾನ್' ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಲೋಕಾರ್ಪಣೆ ಮಾಡಿದರು.

ರಾಮೇಶ್ವರಂ: ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಶಸ್ತಿ ಪುರಸ್ಕೃತ, 'ಮಿಸೈಲ್ ಮ್ಯಾನ್' ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಲೋಕಾರ್ಪಣೆ ಮಾಡಿದರು.
ರಾಮೇಶ್ವರಂನ ಪೈಕರುಂಬ್ ನಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ ಡಿಒ) ನಿರ್ಮಿಸಿರುವ ಅಬ್ದುಲ್ ಕಲಾಂ ಅವರ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದು, ಇಂದು ಕಲಾಂ ಅವರ 2ನೇ ಪುಣ್ಯತಿಥಿಯ ಸಂದರ್ಭದಲ್ಲಿ ಸ್ಮಾರಕವನ್ನು ದೇಶಕ್ಕೆ ಸಮರ್ಪಿಸಲಾಗಿದೆ.
ಕೇಂದ್ರ ಸರ್ಕಾರ ಸ್ಮಾರಕ ನಿರ್ಮಾಣಕ್ಕಾಗಿ ಒಟ್ಟು 50 ಕೋಟಿ ರುಪಾಯಿ ಮಂಜೂರು ಮಾಡಿದ್ದು, ಮೊದಲ ಹಂತದಲ್ಲಿ 15 ಕೋಟಿ ರು. ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿತ್ತು. ಒಟ್ಟು 27 ಸಾವಿರ ಚದರಡಿ ವಿಸ್ತೀರ್ಣದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗಿದೆ.
ಇದೇ ವೇಳೆ ಡಾ.ಎಪಿಜೆ ಅಬ್ದುಲ್ ಕಲಾಂ ಇಂಟರ್ ನ್ಯಾಷನಲ್ ಫೌಂಡೇಷನ್ ನಿರ್ಮಿಸಿರುವ 'ಕಲಾಂ 2020 ವಿಜ್ಞಾನ ವಾಹನ' ಮೊಬೈಲ್ ಮ್ಯೂಸಿಯಂಗೂ ಪ್ರಧಾನಿ ಚಾಲನೆ ನೀಡಿದ್ದಾರೆ. ಇಂದಿನ ಕಾರ್ಯಕ್ರಮದಲ್ಲಿ ತಮಿಳುನಾಡು ಸಿಎಂ ಪಳನಿ ಸ್ವಾಮಿ, ತಮಿಳುನಾಡು ರಾಜ್ಯಪಾಲ ವಿದ್ಯಾಸಾಗರ ರಾವ್ ಅವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


