ಬಿಹಾರದಲ್ಲಿ ಮಹಾಮೈತ್ರಿ ಒಡೆಯಲು ಕಾಂಗ್ರೆಸ್-ಆರ್ಜೆಡಿ ಕಾರಣ: ಸುಶೀಲ್ ಕುಮಾರ್ ಮೋದಿ
ಬಿಹಾರದ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಬಿಹಾರದಲ್ಲಿ ಮಹಾಮೈತ್ರಿ ಒಡೆಯಲು ಕಾಂಗ್ರೆಸ್ ಮತ್ತು ಆರ್ಜೆಡಿ ಕಾರಣ ಎಂದು ಹೇಳಿದ್ದಾರೆ...

Published On :
ಪಾಟ್ನಾ: ಬಿಹಾರದ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಬಿಹಾರದಲ್ಲಿ ಮಹಾಮೈತ್ರಿ ಒಡೆಯಲು ಕಾಂಗ್ರೆಸ್ ಮತ್ತು ಆರ್ಜೆಡಿ ಕಾರಣ ಎಂದು ಹೇಳಿದ್ದಾರೆ.
ಜಾತ್ಯಾತೀತ ಜನತಾದಳ(ಜೆಡಿಯು) ಮತ್ತು ರಾಷ್ಟ್ರೀಯ ಜನತಾದಳ(ಆರ್ಜೆಡಿ) ಮೈತ್ರಿ ಮಾಡಿಕೊಂಡು ಬಿಹಾರದಲ್ಲಿ ಸರ್ಕಾರ ರಚಿಸಿದ್ದವು. ಆದರೆ ಕಾಂಗ್ರೆಸ್ ಮತ್ತು ಆರ್ಜೆಡಿಯಿಂದಾಗಿ ಇಂದು ಮಹಾಮೈತ್ರಿ ಒಡೆದಿದೆ ಎಂದರು.
ಆರ್ಜೆಡಿಯಿಂದ ಹೊರಬಂದಿರುವ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಬಿಜೆಪಿ ಜತೆಗೂಡಿ ನೂತನ ಸರ್ಕಾರ ರಚಿಸಿದ್ದಾರೆ. ಈ ವೇಳೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿಯಾಗಿ ಸುಶೀಲ್ ಕುಮಾರ್ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಬಳಿಕ ಮಾತನಾಡಿದ ಸುಶೀಲ್ ಕುಮಾರ್ ಮೋದಿ ಅವರು ಬಿಹಾರಕ್ಕೆ ಒಳ್ಳೆಯ ದಿನಗಳು ಬಂದಿವೆ. ರಾಜ್ಯದ ಅಭಿವೃದ್ಧಿಯೇ ಬಿಹಾರದ ನೂತನ ಸರ್ಕಾರದ ಮುಖ್ಯ ಉದ್ದೇಶ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿBiharಸುಶೀಲ್ ಕುಮಾರ್ ಮೋದಿಬಿಹಾರರಾಷ್ಟ್ರೀಯ ಜನತಾದಳSushil Kumar ModiRashtriya Janata DalBihar Politicsಬಿಹಾರ ರಾಜಕೀಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


