ರಾಜ್ಯಸಭೆ ಚುನಾವಣೆ: ಗುಜರಾತ್ ನಿಂದ ಅಮಿತ್ ಶಾ, ಸೃತಿ ಇರಾನಿ ನಾಮಪತ್ರ ಸಲ್ಲಿಕೆ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗುಜರಾತ್ ರಾಜ್ಯಸಭೆಗೆ ಸ್ಪರ್ಧಿಸಿದ್ದು, ಶುಕ್ರವಾರ ಗುಜರಾತ್ ಮುಖ್ಯಮಂತ್ರಿ ವಿಜಯ್ ರುಪಾನಿ ಸೇರಿದಂತೆ ಹಲವು ಮುಖಂಡರ ಸಮ್ಮುಖದಲ್ಲಿ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

ಅಹ್ಮದಾಬಾದ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗುಜರಾತ್ ರಾಜ್ಯಸಭೆಗೆ ಸ್ಪರ್ಧಿಸಿದ್ದು, ಶುಕ್ರವಾರ ಗುಜರಾತ್ ಮುಖ್ಯಮಂತ್ರಿ ವಿಜಯ್ ರುಪಾನಿ ಸೇರಿದಂತೆ ಹಲವು ಮುಖಂಡರ ಸಮ್ಮುಖದಲ್ಲಿ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.
ಅಮಿತ್ ಶಾ ಅವರೊಂದಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಬಲ್ವಂತ್ ಸಿಂಗ್ ರಜಪೂತ್ ಅವರೂ ಕೂಡ ನಾಮಪತ್ರ ಸಲ್ಲಿಕೆ ಮಾಡಿದರು. ಪ್ರಸ್ತುತ ಅಮಿತ್ ಶಾ ಸದ್ಯ ಗುಜರಾತ್ ನಲ್ಲಿ ಬಿಜೆಪಿ ಶಾಸಕರಾಗಿದ್ದು, ಸರ್ಕೇಜ್ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಗೆದ್ದಿದ್ದಾರೆ. ಇದೇ ಮೊದಲ ಬಾರಿಗೆ ಅಮಿತ್ ಶಾ ರಾಜ್ಯಸಭೆ ಪ್ರವೇಶಿಸುವ ನಿಟ್ಟಿನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಗುಜರಾತ್ ಸಿಎಂ ವಿಜಯ್ ರುಪಾನಿ, ಗುಜರಾತ್ ಬಿಜೆಪಿ ಘಟಕದ ಮುಖ್ಯಸ್ಥರಾದ ಆನಂದಿ ಬೆನ್ ಪಟೇಲ್ ಹಾಗೂ ಇತರೆ ಬಿಜೆಪಿ ಮುಖಂಡರು ಸಾಥ್ ನೀಡಿದರು.
ಗುಜರಾತ್‌ನಿಂದ ಅಮಿತ್ ಶಾ ಮಾತ್ರವಲ್ಲದೇ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡಾ ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದು, ಹಾಲಿ ರಾಜ್ಯಸಭೆ ಸದಸ್ಯರಾಗಿರುವ ಸ್ಮೃತಿ ಇರಾನಿ ಅವರ ಅವಧಿ ಆಗಸ್ಟ್ 18ಕ್ಕೆ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಅವಧಿಗೆ ರಾಜ್ಯಸಭೆ ಸದಸ್ಯರಾಗಲು ಕಣಕ್ಕಿಳಿಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


