ಹೈದರಾಬಾದ್: ಕಾಂಗ್ರೆಸ್ ನಾಯಕ ಮುಕೇಶ್ ಗೌಡ್ ಪುತ್ರ ಮೇಲೆ ಗುಂಡಿನ ದಾಳಿ
ಕಾಂಗ್ರೆಸ್ ನಾಯಕ ಮೂಲ ಮುಕೇಶ್ ಗೌಡ್ ಅವರ ಪುತ್ರ ವಿಕ್ರಮ್ ಗೌಡ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ...

Published On :
ಹೈದರಾಬಾದ್: ಕಾಂಗ್ರೆಸ್ ನಾಯಕ ಮೂಲ ಮುಕೇಶ್ ಗೌಡ್ ಅವರ ಪುತ್ರ ವಿಕ್ರಮ್ ಗೌಡ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ.
ಹೈದರಾಬಾದ್'ನ ಬಂಜಾರಾ ಹಿಲ್ಸ್ ನಲ್ಲಿರುವ ಸ್ವಗೃಹದ ಬಳಿ ವಿಕ್ರಮ ಗೌಡ್ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ತೀವ್ರವಾಗಿ ಗಾಯಗೊಂಡಿರುವ ವಿಕ್ರಮ್ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಗುಂಡಿನ ದಾಳಿಯಲ್ಲಿ ವಿಕ್ರಮ್ ಅವರ ಭುಜ, ಹೊಟ್ಟೆ ಹಾಗೂ ಬೆನ್ನಿಗೆ ಗಂಭೀರವಾಗಿ ಗಾಯಗಳಾಗಿದ್ದು, ಪ್ರಸ್ತುತ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಹೈದರಾಬಾದ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


