ದೇಶ

ಆರ್ ಜೆಡಿ ಸಖ್ಯ ತೊರೆದ ನಿತೀಶ್ ಗೆ "ವಿಶ್ವಾಸ ಮತ"ದ ಸವಾಲು!

ಗುರುವಾರ 6ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರು ಶುಕ್ರವಾರ ಬಿಹಾರ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಬೇಕಿದೆ.

ಆರ್ ಜೆಡಿ ಸಖ್ಯ ತೊರೆದ ನಿತೀಶ್ ಗೆ "ವಿಶ್ವಾಸ ಮತ"ದ ಸವಾಲು!
ಸಂಗ್ರಹ ಚಿತ್ರ
Published On :

ಪಾಟ್ನಾ: ಗುರುವಾರ 6ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರು ಶುಕ್ರವಾರ ಬಿಹಾರ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಬೇಕಿದೆ.

ಈಗಾಗಲೇ ವಿಶ್ವಾಸ ಮತ ಯಾಚನೆಗೆ ಬಿಹಾರ ವಿಧಾನಸಭೆಯಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ರಾಜಕೀಯ ಪಕ್ಷಗಳು ಅಂತಿಮ ಕ್ಷಣದ ಕಸರತ್ತಿನಲ್ಲಿ ತೊಡಗಿವೆ. ಇನ್ನು ತನ್ನ ಸಖ್ಯ ತೊರೆದಿರುವ ಜೆಡಿಯುಗೆ ಯಾವುದೇ  ಕಾರಣಕ್ಕೂ ಬೆಂಬಲ ನೀಡದಿರವು ಲಾಲು ಪ್ರಸಾದ್ ಯಾದವ್ ನೇತೃತ್ವದ ಆರ್ ಜೆಡಿ ಪಕ್ಷ ನಿರ್ಧರಿಸಿದ್ದು, ನಿನ್ನೆ ಸಂಜೆ ನಡೆದ ಮ್ಯಾರಥಾನ್ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಅಂತೆಯೇ ಕಾಂಗ್ರೆಸ್ ಮಿತ್ರ ಪಕ್ಷಗಳೂ  ಕೂಡ ನಿತೀಶ್ ಕುಮಾರ್ ಬಿಜೆಪಿ ಮೈತ್ರಿ ಸರ್ಕಾರದ ವಿರುದ್ಧ ಮತ ಹಾಕಲು ನಿರ್ಧರಿಸಿವೆ.

ಇನ್ನು 243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿ ಕೂಟದ ಸರ್ಕಾರಕ್ಕೆ ಬಹುಮತ ಸಾಬೀತು ಪಡಿಸಲು 122 ಸದಸ್ಯರ ಬೆಂಬಬಲವಿದ್ದರೆ ಸಾಕು. ಆದರೆ ಬಿಜೆಪಿ-ಜೆಡಿಯು ಮೈತ್ರಿಕೂಟಕ್ಕೆ 132  ಸದಸ್ಯರ ಬೆಂಬಲವಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತೀರಾ ಸಲೀಸಾಗಿ ಬಹುಮತ ಸಾಬೀತು ಪಡಿಸಿ ಸರ್ಕಾರ ಉಳಿಸಿಕೊಳ್ಳಲಿದ್ದಾರೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಪಕ್ಷಗಳ ಬಲಾಬಲದ ವಿಚಾರಕ್ಕೆ ಬರುವುದಾದರೆ ಬಿಹಾರದಲ್ಲಿ ಆರ್ ಜೆಡಿ ಪಕ್ಷ ಅತೀ ಹೆಚ್ಚು ಸದಸ್ಯ ಬಲವನ್ನು ಹೊಂದಿದೆ. ಆರ್ ಜೆಡಿ ಬಳಿ ಒಟ್ಟು 80 ಶಾಸಕರಿದ್ದು, ನಿತೀಶ್ ಕುಮಾರ್ ನೇತೃತ್ವದ ಜೆಡಿಯು 71 ಶಾಸಕರನ್ನು  ಹೊಂದಿದೆ. ಇನ್ನು ಬಿಜೆಪಿ ಮೈತ್ರಿಕೂಟದ ಬಳಿ 58 ಶಾಸಕರ ಬಲವಿದ್ದು, ಕಾಂಗ್ರೆಸ್ ಬಳಿ 27 ಶಾಸಕರಿದ್ದಾರೆ. ಅಂತೆಯೇ 7 ಮಂದಿ ಪಕ್ಷೇತರ ಶಾಸಕರು ಕೂಡ ಇದ್ದಾರೆ ಎಂದು ತಿಳಿದುಬಂದಿದೆ. ಜೆಡಿಯು ಪಕ್ಷದ 71 ಮತ್ತು ಬಿಜೆಪಿ  ಮಿತ್ರಕೂಟದ 58 ಮಂದಿ ಶಾಸಕರನ್ನು ಸೇರಿಸಿದರೆ 129 ಆಗಲಿದ್ದು, ನಿತೀಶ್ ಕುಮಾರ್ ಗೆ ಅಗತ್ಯವಿರುವ ಮ್ಯಾಜಿಕ್ ಸಂಖ್ಯೆಗಿಂತಲೂ 7 ಮಂದಿ ಶಾಸಕರ ಬೆಂಬಲ ಅಧಿಕವಿದೆ.

ಹೀಗಾಗಿ ಸಿಎಂ ನಿತೀಶ್ ಕುಮಾರ್ ಅವರು ನಿರಾಯಾಸವಾಗಿ ಬಹುಮತ ಸಾಬೀತು ಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.