ದೇಶ

ವರದಕ್ಷಿಣೆ ಕಿರುಕುಳ ದೂರು ನೀಡಿದ ತಕ್ಷಣವೇ ಬಂಧಿಸುವಂತಿಲ್ಲ: ಸುಪ್ರೀಂಕೋರ್ಟ್

ವರದಕ್ಷಿಣೆ ಕಿರುಕುಳ ಸಂಬಂಧ ಕಾನೂನು ದುರುಪಯೋಗವಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲು ಮಹತ್ವದ ನಿರ್ದೇಶನಗಳನ್ನು ಸುಪ್ರೀಂ ಕೋರ್ಟ್‌ ...

ವರದಕ್ಷಿಣೆ ಕಿರುಕುಳ ದೂರು ನೀಡಿದ ತಕ್ಷಣವೇ ಬಂಧಿಸುವಂತಿಲ್ಲ: ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Published On :
ನವದೆಹಲಿ: ವರದಕ್ಷಿಣೆ ಕಿರುಕುಳ ಸಂಬಂಧ ಕಾನೂನು ದುರುಪಯೋಗವಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲು ಮಹತ್ವದ ನಿರ್ದೇಶನಗಳನ್ನು ಸುಪ್ರೀಂ ಕೋರ್ಟ್‌ ನೀಡಿದೆ.
ವರದಕ್ಷಿಣೆ ಕಿರುಕುಳ ಆರೋಪದ ಪ್ರಕರಣಗಳಲ್ಲಿ ದೌರ್ಜನ್ಯಕ್ಕೆ ಒಳಗಾಗುವ 
ಮಹಿಳೆಯರು ನೀಡಿದ ದೂರನ್ನು ನಾಗರಿಕ ಸಮಾಜದ ಸದಸ್ಯರು ಇರುವ ಸಮಿತಿ ಪರಿಶೀಲಿಸದೆ ಯಾರನ್ನೂ ಬಂಧಿಸಬಾರದು ಎಂದು ಕೋರ್ಟ್‌ ಹೇಳಿದೆ.
ದೂರುಗಳ ಪರಿಶೀಲನೆಗಾಗಿ ಪ್ರತಿ ಜಿಲ್ಲೆಯಲ್ಲಿಯೂ ಸಮಿತಿಯನ್ನು ರಚಿಸುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ. ಈ ಸಮಿತಿಯಲ್ಲಿ ನಾಗರಿಕ ಸಮಾಜದ ಸದಸ್ಯರು, ಅಧಿಕಾರಿಗಳ ಪತ್ನಿಯರು, ನಿವೃತ್ತ ಅಧಿಕಾರಿಗಳು ಮತ್ತು ಕಾನೂನು ಸ್ವಯಂ ಸೇವಕರು ಇರಬೇಕು ಎಂದು ತಿಳಿಸಿದೆ.
ದಂಪತಿ ಮತ್ತು ಅವರ ಕುಟುಂಬದ ಸದಸ್ಯರನ್ನು ಕರೆಸಿ ವಿಷಯದ ಸಂಬಂಧ ಸಮಿತಿ ಚರ್ಚಿಸಬೇಕು. ನಂತರ ಸಮಿತಿ ವರದಿಯನ್ನು ಸ್ಥಳೀಯ ಮ್ಯಾಜಿಸ್ಟ್ರೇಟ್ ಗೆ ಸಲ್ಲಿಸುವಂತೆ ಸೂಚಿಸಿದೆ. ಒಂದು ವೇಳೆ ಗಂಡನ ತಪ್ಪು ಇರುವುದು ಕಂಡು ಬಂದರೇ ಬಂಧಿಸಲು ಸಮಿತಿ ಸೂಚಿಸಿದ ನಂತರವಷ್ಟೇ ಬಂಧಿಸಬೇಕು ಎಂದು ಕೋರ್ಟ್ ತಿಳಿಸಿದೆ.
ನಂತರ ಸಮಿತಿಯಿಂದ ಪಡೆದ ವರದಿಯನ್ನು ತನಿಖಾಧಿಕಾರಿ  ಪರಿಶೀಲಿಸಿದ ನಂತರ ಅಥವಾ ನ್ಯಾಯಾಧೀಶರು ಸ್ವಂತ ಅರ್ಹತೆಯ  ಮೇಲೆ ಶಿಕ್ಷೆ ನೀಡಬಹುದು. 
ಪತಿ ವಿರುದ್ಧ ಪ್ರಾಥಮಿಕ ತನಿಖೆ ನಡೆಸಿ, ಆತನ ಮೇಲಿನ ಆರೋಪ ಸಾಬೀತು ಮಾಡುವ ಸಾಕ್ಷ್ಯ ದೊರೆತ ಅನಂತರವಷ್ಟೇ ಬಂಧಿಸಬೇಕು,' ಎಂದಿದೆ. ಅನಗತ್ಯ ಬಂಧನ ಅಥವಾ ಒರಟು ವಿಚಾರಣೆಯಿಂದ ರಕ್ಷಣೆ ಒದಗಿಸಲು ನ್ಯಾಯಾಲಯವು ಈ ಕ್ರಮ ಕೈಗೊಂಡಿದೆ’ ಎಂದು ಪೀಠ ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.