ಭಷ್ಟಾಚಾರವನ್ನು ಸಮರ್ಥಿಸಿಕೊಳ್ಳಲು ಜಾತ್ಯಾತೀತತೆಯ ಬಳಕೆ ಬೇಡ: ಸಿಎಂ ನಿತೀಶ್ ಕುಮಾರ್
ಭಷ್ಟಾಚಾರವನ್ನು ಸಮರ್ಥಿಸಿಕೊಳ್ಳಲು ಜ್ಯಾತ್ಯಾತೀತತೆಯನ್ನು ಎಂದಿಗೂ ಬಳಕೆ ಮಾಡಬಾರದು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಶುಕ್ರವಾರ ಹೇಳಿದ್ದಾರೆ.

ಪಾಟ್ನಾ: ಭಷ್ಟಾಚಾರವನ್ನು ಸಮರ್ಥಿಸಿಕೊಳ್ಳಲು ಜಾತ್ಯಾತೀತತೆಯನ್ನು ಎಂದಿಗೂ ಬಳಕೆ ಮಾಡಬಾರದು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಶುಕ್ರವಾರ ಹೇಳಿದ್ದಾರೆ.
ಶುಕ್ರವಾರ ವಿಶ್ವಾಸ ಮತ ಯಾಚನೆಗೂ ಮುನ್ನ ಬಿಹಾರ ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ನಿತೀಶ್ ಕುಮಾರ್ ಅವರು ಆರ್ ಜೆಡಿ ಸಖ್ಯ ತೊರೆದ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡರು. ಈ ವೇಳೆ ಮಾತನಾಡಿದ ಅವರು, ಅಧಿಕಾರ ಎನ್ನುವುದು ರಾಜಭೋಗಕ್ಕಾಗಿ ಅಲ್ಲ. ನಮ್ಮ ಮೇಲೆ ಭರವಸೆ ಇಟ್ಟು ಆರಿಸಿರುವ ಜನರ ಸೇವೆ ಮಾಡುವುದಕ್ಕಾಗಿ. ನಮ್ಮ ಸರ್ಕಾರ ಎಂದಿಗೂ ಭ್ರಷ್ಟಾಚಾರವನ್ನು ಮತ್ತು ದುರಾಡಳಿತವನ್ನು ಸಹಿಸುವುದಿಲ್ಲ. ಜನಪರ ಸರ್ಕಾರ ಮುಂದುವರೆಯುತ್ತದೆ ಮತ್ತು ಬಿಹಾರದ ಅಭಿವೃದ್ಧಿಯತ್ತ ಚಿತ್ತ ಹರಿಸುತ್ತದೆ ಎಂದು ಹೇಳಿದರು.
ಅಂತೆಯೇ ಆರ್ ಜೆಡಿ ಪಕ್ಷದ ವಿರುದ್ಧ ಕಿಡಿಕಾರಿದ ಅವರು, ಭಷ್ಟಾಚಾರವನ್ನು ಸಮರ್ಥಿಸಿಕೊಳ್ಳಲು ಜ್ಯಾತ್ಯಾತೀತತೆಯನ್ನು ಎಂದಿಗೂ, ಯಾರೂ ಬಳಕೆ ಮಾಡಿಕೊಳ್ಳಬಾರದು. ತಪ್ಪು ಹಾದಿಯಲ್ಲಿ ಹಣ ಗಳಿಸುವವರನ್ನು ಜನತೆ ಎಂದೂ ಕ್ಷಮಿಸುವುದಿಲ್ಲ ಎಂದು ನಿತೀಶ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


