ಸದಾಕಾಲ ಸನ್ನದ್ಧರಾಗಿರಿ: ಯೋಧರಿಗೆ ಸೇನಾ ಮುಖ್ಯಸ್ಥರ ಸೂಚನೆ
ಯಾವುದೇ ಪರಿಸ್ಥಿತಿ ಎದುರಿಸಲು ಸದಾಕಾಲ ಸನ್ನದ್ಧರಾಗಿರಿ ಎಂದು ಭಾರತೀಯ ಸೇನಾ ಯೋಧರಿಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಶುಕ್ರವಾರ ಸೂಚನೆ ನೀಡಿದ್ದಾರೆ...

Published On :
ಶ್ರೀನಗರ: ಯಾವುದೇ ಪರಿಸ್ಥಿತಿ ಎದುರಿಸಲು ಸದಾಕಾಲ ಸನ್ನದ್ಧರಾಗಿರಿ ಎಂದು ಭಾರತೀಯ ಸೇನಾ ಯೋಧರಿಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಶುಕ್ರವಾರ ಸೂಚನೆ ನೀಡಿದ್ದಾರೆ.
ನಿನ್ನೆಯಷ್ಟೇ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು, ಗಡಿ ನಿಯಂತ್ರಣ ರೇಖೆ ಬಳಿಯಿರುವ ಪರಿಸ್ಥಿತಿಯನ್ನು ಅವಲೋಕಿಸಿಸಿದರು.
ಜಮ್ಮು ರಕ್ಷಣಾ ವಕ್ತಾರ ಲೆ.ಕ.ಮನೀಷ್ ಮೆಹ್ತಾ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರೊಂದಿಗೆ ಉತ್ತರ ಸೇನಾವಲಯದ ಜನರಲ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್ ಲೆ.ಜ ದೇವರಾಜ್ ಅನ್ಬು ಜಮ್ಮುವಿನ 16 ಕಾರ್ಪ್ಸ್ ಮುಖ್ಯ ಕಚೇರಿಗೆ ಭೇಟಿ ನೀಡಿ ಸೇನಾ ಕಾರ್ಯಾಚರಣೆಗಳ ತಯಾರಿ ಹಾಗೂ ರಾಜ್ಯದಲ್ಲಿ ಪರಿಸ್ಥಿತಿ ನಿಭಾಯಿಸಲು ತೆಗೆದುಕೊಂಡಿರುವ ಕ್ರಮಗಳ ಕುರಿತಂತೆ ಪರಿಶೀಲನೆ ನಡೆಸಿದರು ಎಂದು ಹೇಳಿದ್ದಾರೆ.
ಭೇಟಿ ವೇಳೆ 16 ಕಾರ್ಪ್ಸ್ ಜನರಲ್ ಆಫೀಸರ್ ಕಮಾಂಡಿಂಗ್ ಲೆ.ಜ. ಎ.ಕೆ.ಶರ್ಮಾ ಅವರು ಸೇನೆಯ ತಯಾರಿ ಕುರಿತಂತೆ ಮಾಹಿತಿ ನೀಡಿದರು. ಈ ವೇಳೆ ಯೋಧರಿಗೆ ಸೂಚನೆ ನೀಡಿದ ರಾವತ್ ಅವರು, ಯಾವುದೇ ಪರಿಸ್ಥಿತಿ ಎದುರಿಸಲು ಸದಾಕಾಲ ಸನ್ನದ್ಧರಾಗಿರುವಂತೆ ತಿಳಿಸಿದರು. ಭಾರತದೊಳಗೆ ನುಸುಳಲು ಉಗ್ರರಿಗೆ ಪಾಕಿಸ್ತಾನ ಸೇನೆ ಸಹಾಯ ಮಾಡುತ್ತಿದ್ದು, ಗಡಿಯಲ್ಲಿ ಸದಾಕಾಲ ಕಣ್ಗಾವಲಿರಿಸುವಂತೆ ತಿಳಿಸಿದ್ದಾರೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


