ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಗೆಲುವು ಅಸಾಧ್ಯ: ಗುಜರಾತ್ ಕಾಂಗ್ರೆಸ್ ಶಾಸಕ
ಮತ್ತಷ್ಟು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡುವ ಕಾರಣದಿಂದ ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್...

Published On :
ಅಹಮದಾಬಾದ್: ಮುಂಬರುವ ದಿನಗಳಲ್ಲಿ ಮತ್ತಷ್ಟು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡುವ ಕಾರಣದಿಂದ ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಗೆಲುವು ಸಾಧ್ಯವಿಲ್ಲ ಎಂದು ಗುಜರಾತ್ ಶಾಸಕ ರಾಘ್ವಾಜೆ ಪಟೇಲ್ ಹೇಳಿದ್ದಾರೆ.
ಶಂಕರ್ ಸಿಂಗ್ ವಘೇಲಾ ಅವರ ಅತ್ಯಂತ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಶಾಸಕ ರಾಘ್ವಾಜೆ ಪಟೇಲ್ ತಾವು ಕೂಡ ಶೀಘ್ರವೇ ಬಿಜೆಪಿ ಸೇರುವ ಸುಳಿವು ನೀಡಿದ್ದಾರೆ.
ಆಗಸ್ಟ್ 8 ರಂದು ನಡೆಯುವ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಅಹ್ಮದ್ ಪಟೇಲ್ ಸ್ಪರ್ಧಿಸಿದ್ದಾರೆ. ಸದ್ಯ ಪಕ್ಷದಲ್ಲಿ ಉಂಟಾಗಿರುವ ಎಲ್ಲಾ ಬೆಳವಣಿಗೆಗಳಿಗೆ ರಾಜ್ಯ ಮತ್ತು ರಾಷ್ಚ್ರೀಯ ಕಾಂಗ್ರೆಸ್ ಹೊಣೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಕೇವಲ 20 ಶಾಸಕರು ಮಾತ್ರ ಪಕ್ಷದೊಂದಿಗಿದ್ದಾರೆ. ಹೀಗಿರುವಾಗ ರಾಜ್ಯಸಭಾ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಗೆಲ್ಲುವುದು ಸಾಧ್ಯವಿಲ್ಲ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇತ್ತೀಚಿಗೆ ನಾನು ಅಹ್ಮದ್ ಪಟೇಲ್ ಅವರನ್ನು ಭೇಟಿ ಮಾಡಿದ್ದೆ. ನನಗೆ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಮಾಹಿತಿಯಿದ್ದ ಕಾರಣ ನಾನು ಅವರನ್ನು, ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡ ಎಂದು ಹೇಳಿದ್ದೆ. ಯಾವುದೇ ಕಾರಣಕ್ಕೂ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಗುಜರಾತ್ ನಲ್ಲಿ ಕೇವಲ ಎರಡು ಪ್ರಮುಖ ಪಕ್ಷಗಳಿವೆ, ಒಂದು ವೇಳೆ ನಾನು ಕಾಂಗ್ರೆಸ್ ತ್ಯಜಿಸಿದರೇ ನನಗೆ ಇರುವ ಅವಕಾಶ ಒಂದೇ , ಅದು ಬಿಜೆಪಿ, ಜಾಮಾನಗರದ ಮತ್ತೊಬ್ಬ ಶಾಸಕ ಧರ್ಮೇಂದ್ರ ಸಿನ್ಹಾ ಜಡೇಜಾ ಕಾಂಗ್ರೆಸ್ ಬಿಡುವ ಬಗ್ಗೆ ಸುಳಿವು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Gujaratಗುಜರಾತ್winCongress MLAಗೆಲುವುಕಾಂಗ್ರೆಸ್ ಶಾಸಕRajya Sabha pollsರಾಜ್ಯ ಸಭೆ ಚುನಾವಣೆAhmed Patelಅಹ್ಮದ್ ಪಟೇಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


