ಭಾರತೀಯ ಸೇನೆಯಲ್ಲಿ 52 ಸಾವಿರ ಸಿಬ್ಬಂದಿಗಳ ಕೊರತೆ!
ಭಾರತೀಯ ಸೇನೆಯಲ್ಲಿ ಪ್ರಸ್ತುತ 52 ಸಾವಿರ ಸೈನಿಕರ ಕೊರತೆ ಇದೆ ಎಂದು ಸ್ವತಃ ಕೇಂದ್ರ ಸರ್ಕಾರ ಶುಕ್ರವಾರ ಒಪ್ಪಿಕೊಂಡಿದೆ.

ನವದೆಹಲಿ: ಭಾರತೀಯ ಸೇನೆಯಲ್ಲಿ ಪ್ರಸ್ತುತ 52 ಸಾವಿರ ಸೈನಿಕರ ಕೊರತೆ ಇದೆ ಎಂದು ಸ್ವತಃ ಕೇಂದ್ರ ಸರ್ಕಾರ ಶುಕ್ರವಾರ ಒಪ್ಪಿಕೊಂಡಿದೆ.
ಪ್ರಮುಖವಾಗಿ ನೌಕಾಪಡೆ ಹಾಗೂ ವಾಯುಪಡೆಗಳಲ್ಲಿ ಯಥೇಚ್ಛ ಸೈನಿಕರ ಕೊರತೆ ಕಂಡುಬಂದಿದ್ದು, ಕೆಳ ಹಂತದ ಸಿಬ್ಬಂದಿಗಳಿಂದ ಹಿರಿಯ ಅಧಿಕಾರಿಗಳ ವರೆಗೂ ಹಲವು ಹುದ್ದೆಗಳು ಖಾಲಿ ಇವೆ. ಕಳೆದ ಎರಡು ವರ್ಷಗಳಲ್ಲಿ ಸೇನೆಗೆ 245 ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲಾಗಿದೆ ಎಂದು ಕೇಂದ್ರ ರಕ್ಷಣಾ ಖಾತೆಯ ಸಹಾಯಕ ಸಚಿವ ಸುಭಾಷ್ ಭಮ್ರೆ ತಿಳಿಸಿದ್ದಾರೆ. ಈ ಬಗ್ಗೆ ಸಂಸತ್ ಗೆ ಶುಕ್ರವಾರ ಲಿಖಿತ ಉತ್ತರ ನೀಡಿದ ಸಚಿವರು, ಸೇನೆಯಲ್ಲಿ ಒಟ್ಟು 25,472 ಕೆಳಹಂತದ ಸಹಾಯಕ ಸಿಬ್ಬಂದಿಗಳ ಕೊರೆತೆ ಇದೆ.
ಈ ಪೈಕಿ ನೌಕಾಳದಲ್ಲಿ 13,373 ಸಿಬ್ಬಂದಿ ಕೊರತೆ ಕಂಡುಬಂದಿದ್ದು, ವಾಯುಪಡೆಯಲ್ಲಿ 13,785 ಸಿಬ್ಬಂದಿಗಳ ಕೊರತೆ ಕಂಡುಬಂದಿದೆ. ಅಂತೆಯೇ 2014ರಿಂದ 2016ರ ಅವಧಿಯಲ್ಲಿ ಒಟ್ಟು 245 ಮಹಿಳಾ ಸೈನಿಕರನ್ನು ನಿಯೋಜನೆ ಮಾಡಿಕೊಳ್ಳಲಾಗಿದ್ದು, ನೌಕಾಳದಲ್ಲಿ 486 ಮಹಿಳಾ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗಿದೆ. ಅಂತೆಯೇ 135 ಮಹಿಳಾ ಸೈನಿಕರನ್ನು ವಾಯುಪಡೆ ನಿಯೋಜಿಸಿಕೊಂಡಿದೆ ಎಂದು ಅವರು ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


