ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರನ್ನು ಸದೆಬಡಿದ ಸೇನೆ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತಹಬ್ ಪ್ರದೇಶದಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸುತ್ತಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ...

Published On :
ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತಹಬ್ ಪ್ರದೇಶದಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸುತ್ತಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ.
ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ತಿಳಿದುಬಂದ ಹಿನ್ನಲೆಯಲ್ಲಿ ತಹಬ್ ಗ್ರಾಮದಲ್ಲಿ ವಿಶೇಷ ಕಾರ್ಯಾಚರಣಾ ಪಡೆ, 44 ರಾಷ್ಟ್ರೀಯ ರೈಫಲ್ಸ್ ಜಂಟಿಯಾಗಿ ಕಾರ್ಯಾಚರಣೆಗಳಿದಿತ್ತು. ಸೇನೆ ಕಾರ್ಯಾಚರಣೆಗಿಳಿಯುತ್ತಿದ್ದಂತೆಯೇ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದರು ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್ ರಾಜೇಶ್ ಕಲಿಯಾ ಅವರು ಹೇಳಿದ್ದಾರೆ.
ಉಗ್ರರು ಗುಂಡಿನ ದಾಳಿ ನಡೆಸುತ್ತಿದ್ದಂತೆಯೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಸೇನಾಪಡೆಗಳು ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ. ಹತ್ಯೆಯಾದ ಉಗ್ರರನ್ನು ಇರ್ಫಾನ್ ಶೇಖ್ ಮತ್ತು ಅಬಿದ್ ಎಂದು ಗುರ್ತಿಸಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


