ದೇಶ

ಮೆಘಾಲಯ: ಹಿರಿಯ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪೊಲೀಸ್ ಪೇದೆ

ಮೆಘಾಲಯದಲ್ಲಿ ಪೊಲೀಸ್ ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಹಿರಿಯ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಭೂಗತನಾಗಿರುವ....

ಮೆಘಾಲಯ: ಹಿರಿಯ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪೊಲೀಸ್ ಪೇದೆ
ಸಾಂದರ್ಭಿಕ ಚಿತ್ರ
Published On :
ಗುವಾಹತಿ: ಮೆಘಾಲಯದಲ್ಲಿ ಪೊಲೀಸ್ ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಹಿರಿಯ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಭೂಗತನಾಗಿರುವ ಘಟನೆ ಭಾನುವಾರ ನಡೆದಿದೆ.
28 ವರ್ಷದ ಪೊಲೀಸ್ ಪೇದೆ ಲುಸೆನ್ ಸಂಗಮ್ ತನ್ನ ಎಸ್ ಎಲ್ ಆರ್ ಗನ್ ನಿಂದ ಹವಲ್ದಾರ್ ಲಿಟ್ ಸಿಂಗ್ ಇಂಘಿ ಅವರ ಮೇಲೆ ಆರು ಬಾರಿ ಗುಂಡಿನ ದಾಳಿ ನಡೆಸಿ ರೈಫಲ್ ನೊಂದಿಗೆ ಪರಾರಿಯಾಗಿದ್ದಾನೆ.
ಪಶ್ಚಿಮ ಜೈಂತಿಯಾ ಹಿಲ್ಸ್ ನ ಜೋವಾಯಿಯಿಂದ 15 ಕಿ.ಮೀ.ದೂರದಲ್ಲಿರುವ ಸಭ್ ಸಿಯನ್ ನ 3ನೇ ಬೆಟಾಲಿಯನ್ ನಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದೆ ಎಂದು ಪಶ್ಚಿಮ ಜೈಂತಿಯಾ ಹಿಲ್ಸ್ ಪೊಲೀಸ್ ವರಿಷ್ಠಾಧಿಕಾರಿ ಆರ್ ಮುತ್ತು ಅವರು ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
ಲಿಟ್ಸ್ ಸಿಂಗ್ ಇಂಘಿ ಅವರು ಇತರೆ ಇಬ್ಬರು ಸಹೋದ್ಯೋಗಿಗಳೊಂದಿಗೆ ತಮ್ಮ ರೂಮ್ ನಲ್ಲಿ ಕುಳಿತಿದ್ದ ವೇಳೆ ಅಲ್ಲಿಗೆ ಆಗಮಿಸಿದ ಸಂಗಮ್ ಮನಬಂದಂತೆ ಗುಂಡು ಹಾರಿಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಲಿಟ್ಸ್ ಸಿಂಗ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ದಾರಿ ಮಧ್ಯೆಯೇ ಅವರು ಮೃತಪಟ್ಟಿದ್ದರು ಎಂದು ಮುತ್ತು ಹೇಳಿದ್ದಾರೆ.
ಹತ್ಯೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಆದರೆ ಸಂಗಮ್ ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾನೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.