ಭಯೋತ್ಪಾದನೆಗೆ ಹಣಕಾಸು ನೆರವು: ಗಿಲಾನಿ ದ್ವಿತೀಯ ಪುತ್ರನಿಗೆ ಎನ್ಐಎ ಸಮನ್ಸ್
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಕೃತ್ಯಗಳಿಗೆ ಹಣಕಾಸು ನೆರವು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)...

Published On :
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಕೃತ್ಯಗಳಿಗೆ ಹಣಕಾಸು ನೆರವು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ದ್ವಿತೀಯ ಪುತ್ರನಿಗೆ ಸಮನ್ಸ್ ಜಾರಿ ಮಾಡಿದೆ.
ಭಯೋತ್ಪದಾನೆ ಕೃತ್ಯಗಳಿಗೆ ಹಣಕಾಸು ನೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಗಿಲಾನಿ ಆಪ್ತರ ಮನೆ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಬಳಿಕ ಗಿಲಾನಿ ದ್ವಿತೀಯ ಪುತ್ರ ನಸೀಮ್ ಗೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ. ಇನ್ನು ಗಿಲಾನಿ ಹಿರಿಯ ಪುತ್ರ ನಯೀಮ್ ಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಎನ್ಐಎ ಸೂಚಿಸಿತ್ತು.
ಎನ್ಐಎ ದಾಳಿ ಬಳಿಕ ನಯೀಮ್ ಗಿಲಾನಿ ಎದೆ ನೋವು ಎಂದು ಕಾರಣ ನೀಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಯೀಮ್ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರತ್ಯೇಕತಾವಾದಿ ಗುಂಪುಗಳಿಗೆ ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಹಣ ಸರಬರಾಜು ಮಾಡಲಾಗಿದೆ ಎಂಬ ಆಪಾದನೆಗಳ ಹಿನ್ನೆಲೆಯಲ್ಲಿ ಇತ್ತೀಚೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಎನ್ಐಎ ಇಂದು ಎರಡನೇ ಬಾರಿ ಕಾಶ್ಮೀರದಲ್ಲಿ ದಾಳಿ ನಡೆಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


