2019 ರಲ್ಲಿ ಮೋದಿಯನ್ನು ಎದುರಿಸುವ ನಾಯಕ ಯಾರೂ ಇಲ್ಲ: ನಿತೀಶ್ ಕುಮಾರ್
ಮಹಾಮೈತ್ರಿ ತೊರೆಯುವುದನ್ನು ಬಿಟ್ಟು ಬೇರೆ ಆಯ್ಕೆ ಇರಲಿಲ್ಲ, 2019 ರಲ್ಲಿ ಪ್ರಧಾನಿ ಮೋದಿ ಅವರನ್ನು ಎದುರಿಸುವ ನಾಯಕ ಯಾರೂ ಇಲ್ಲ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.

Published On :
ಪಾಟ್ನಾ: ಆರ್ ಜೆಡಿ, ಕಾಂಗ್ರೆಸ್ ನೊಂದಿಗಿನ ಮಹಾಮೈತ್ರಿಯನ್ನು ತೊರೆದಿರುವ ಬಗ್ಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಮಹಾಮೈತ್ರಿ ತೊರೆಯುವುದನ್ನು ಬಿಟ್ಟು ಬೇರೆ ಆಯ್ಕೆ ಇರಲಿಲ್ಲ ಎಂದು ಹೇಳಿದ್ದಾರೆ.
ಲಾಲು ಪ್ರಸಾದ್ ಯಾದವ್ ಅವರ ಕುಟುಂಬ ನಡೆಸುತ್ತಿದ್ದ ಭ್ರಷ್ಟಾಚಾರಗಳನ್ನು ತಡೆದುಕೊಳ್ಳಲು ಕಷ್ಟವಾಗುತ್ತಿತ್ತು ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ಇದೇ ವೇಳೆ ಸಿಬಿಐ ದಾಳಿಗೆ ಸಂಬಂಧಿಸಿದಂತೆಯೂ ಮಾತನಾಡಿರುವ ನಿತೀಶ್ ಕುಮಾರ್, ಸಿಬಿಐ ದಾಳಿ ನಡೆದಿರುವ ಬಗ್ಗೆ ಸ್ಪಷ್ಟನೆ ನೀಡಿ ಎಂದು ಲಾಲು ಪ್ರಸಾದ್ ಯಾದವ್ ಅವರಲ್ಲಿ ಹೇಳಿದ್ದೆ. ಭ್ರಷ್ಟಾಚಾರದ ವಿಷಯ ಎದುರಾದಾಗ ನಾನು ಭ್ರಷ್ಟಾಚಾರವನ್ನು ಸಮರ್ಥಿಸುವುದಕ್ಕೆ ಸಾಧ್ಯವಿಲ್ಲ ಎನಿಸಿ ಮಹಾಮೈತ್ರಿ ತೊರೆಯಲು ತೀರ್ಮಾನಿಸಿದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
ಮಹಾಮೈತ್ರಿಯನ್ನು ಉಳಿಸಿಕೊಳ್ಳುವ ಸಲುವಾಗಿ ಲಾಲು ಪ್ರಸಾದ್ ಯಾದವ್ ಅವರನ್ನು ತಡೆದುಕೊಂಡಿದ್ದೆ, ಆದರೆ ಭ್ರಷ್ಟಾಚಾರ ಹೆಚ್ಚಿದಂತೆಲ್ಲಾ ಮಹಾಮೈತ್ರಿಯನ್ನು ಉಳಿಸಿಕೊಳ್ಳುವುದು ಕಷ್ಟವಾಯಿತು, ಆದ್ದರಿಂದ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಬೇಕಾಯಿತು ಮಹಾಮೈತ್ರಿ ತೊರೆಯುವುದನ್ನು ಬಿಟ್ಟು ಬೇರೆ ಆಯ್ಕೆ ಇರಲಿಲ್ಲ ಎಂದು ನಿತೀಶ್ ಕುಮಾರ್ ಮಹಾಮೈತ್ರಿಕೂಟವನ್ನು ತೊರೆದಿದ್ದಕ್ಕೆ ಸ್ಪಷ್ಟನೆ ನೀಡಿದ್ದಾರೆ.
2019 ರಲ್ಲಿ ಮೋದಿಯನ್ನು ಎದುರಿಸುವ ನಾಯಕ ಯಾರೂ ಇಲ್ಲ
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆಯೂ ಮಾತನಾಡಿರುವ ನಿತೀಶ್ ಕುಮಾರ್ 2019 ರಲ್ಲಿ ಪ್ರಧಾನಿ ಮೋದಿ ಅವರನ್ನು ಎದುರಿಸುವ ನಾಯಕ ಯಾರೂ ಇಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿ2019 electionsBihar CM Nitish Kumarಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್2019 ರ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


