ಖ್ಯಾತ ದ್ರುಪದ್ ಗಾಯಕ ಉಸ್ತಾದ್ ಸಯೀದುದ್ದೀನ್ ಡಾಗರ್ ನಿಧನ
ಖ್ಯಾತ ದ್ರುಪದ್ ಗಾಯಕ ಉಸ್ತಾದ್ ಸಯೀದುದ್ದೀನ್ ಡಾಗರ್ ಅವರು ವಿಧಿವಶರಾಗಿದ್ದಾರೆ ಎಂದು ಸೋಮವಾರ ಅವರ ಕುಟುಂಬದ ಮೂಲಗಳು ತಿಳಿಸಿವೆ.

Published On :
ಪುಣೆ: ಖ್ಯಾತ ದ್ರುಪದ್ ಗಾಯಕ ಉಸ್ತಾದ್ ಸಯೀದುದ್ದೀನ್ ಡಾಗರ್ ಅವರು ವಿಧಿವಶರಾಗಿದ್ದಾರೆ ಎಂದು ಸೋಮವಾರ ಅವರ ಕುಟುಂಬದ ಮೂಲಗಳು ತಿಳಿಸಿವೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 78 ವರ್ಷದ ಉಸ್ತಾದ್ ಅವರು ನಿನ್ನೆ ರಾತ್ರಿ ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಉಸ್ತಾದ್ ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬವನ್ನು ಅಗಲಿದ್ದಾರೆ. ಜೈಪುರದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.
1939, ಎಪ್ರಿಲ್ 20ರಂದು ಅಲ್ವಾರ್ ನ ಖ್ಯಾತ ಶಾಸ್ತ್ರೀಯ ಗಾಯಕರ ಕುಟುಂಬದಲ್ಲಿ ಜನಿಸಿದ್ದ ಉಸ್ತಾದ್ ಅವರು ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತದ ಪ್ರಕಾರವಾದ ದ್ರುಪದ್ ನಲ್ಲಿ ಖ್ಯಾತಿ ಗಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


