ಡ್ರಗ್ಸ್ ಮಾಫಿಯಾ: ಎಸ್ಐಟಿ ವಿಚಾರಣೆಗೆ ನಟ ಆನಂದ ಕೃಷ್ಣಾ ನಂದು ಹಾಜರು
ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ಆನಂದ ಕೃಷ್ಣಾ ನಂದು ಅವರನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು (ಎಸ್ಐಟಿ)...

Published On :
ಹೈದರಾಬಾದ್: ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ಆನಂದ ಕೃಷ್ಣಾ ನಂದು ಅವರನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು (ಎಸ್ಐಟಿ) ಮಂಗಳವಾರ ವಿಚಾರಣೆಗೊಳಪಡಿಸಿದ್ದಾರೆ.
ಡ್ರಗ್ಸ್ ಪ್ರಕರಣ ಸಂಬಂಧ ವಿಚಾರಣೆಗಾಗಿ ತೆಲಂಗಾಣದ ಅಬಕಾರಿ ಭವನಕ್ಕೆ ಹಾಜರಾದ ಆನಂದ ಕೃಷ್ಣಾ ನಂದು ಅವರು ಮೊದಲಿಗೆ ಅಬಕಾರಿ ಇಲಾಖೆಯ ಕಚೇರಿ ಬಳಿಯಿರುವ ದೇಗುಲಕ್ಕೆ ಭೇಟಿ ನೀಡಿ ಪೂಜೆಯನ್ನು ಸಲ್ಲಿಸಿದರು. ನಂತರ ವಿಶೇಷ ತನಿಖಾ ದಳದ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಡ್ರಗ್ಸ್ ಮಾಫಿಯಾದಲ್ಲಿ ಬಂಧನಕ್ಕೊಳಗಾಗಿರುವ ಕೆಲ್ವಿನ್ ಮೊಬೈಲ್ ಕಾಲ್ ಡಾಟಾದಲ್ಲಿ ಈ ಹಿಂದೆ ಆನಂದ ಕೃಷ್ಣಾ ನಂದು ಅವರ ಫೋನ್ ನಂಬರ್ ಇರುವುದು ಬಹಿರಂಗಗೊಂಡಿತ್ತು. ಈ ಹಿನ್ನಲೆಯಲ್ಲಿ ಆನಂದ ಕೃಷ್ಣಾ ನಂದು ಅವರಿಗೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದರು. ನೋಟಿಸ್ ಜಾರಿಯಾದ ಹಿನ್ನಲೆಯಲ್ಲಿ ಆನಂದ್ ಅವರು ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
ಡ್ರಗ್ಸ್ ಮಾಫಿಯಾ ಪ್ರಕರಣ ಸಂಬಂಧ ಈ ವರೆಗೂ 12 ಪ್ರಮುಖ ಟಾಲಿವುಡ್ ನಟ, ನಟಿ ಹಾಗೂ ನಿರ್ದೇಶಕರ ಹೆಸರುಗಳು ಕೇಳಿಬಂದಿವೆ. ನಿನ್ನೆಯಷ್ಟೇ ನಟ ತನೀಷ್ ಅಲ್ಲಾಡಿಯವರನ್ನು 4 ಗಂಟೆಗಳ ಕಾಲ ಸುಧೀರ್ಘ ವಿಚಾರಣೆಗೊಳಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


