ದೇಶ

ಪ್ರವಾಹ ಪೀಡಿತ ಈಶಾನ್ಯ ರಾಜ್ಯಗಳಿಗೆ 2,000 ಕೋಟಿ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಗುವಾಹಾಟಿಯಲ್ಲಿ ನಡೆದ ಉನ್ನತ ಮಟ್ಟದ ಸರಣಿ ಸಭೆಗಳಲ್ಲಿ ನೆರೆ ಪ್ರವಾಹ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಿದ...

ಪ್ರವಾಹ ಪೀಡಿತ ಈಶಾನ್ಯ ರಾಜ್ಯಗಳಿಗೆ 2,000 ಕೋಟಿ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಗುವಾಹಟಿಯಲ್ಲಿ ಪ್ರವಾಹ ಪರಿಸ್ಥಿತಿ ಪರಾಮರ್ಶೆ ಸಭೆಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ
Published On :
ನವದೆಹಲಿ: ಗುವಾಹಾಟಿಯಲ್ಲಿ ನಡೆದ ಉನ್ನತ ಮಟ್ಟದ ಸರಣಿ ಸಭೆಗಳಲ್ಲಿ ನೆರೆ ಪ್ರವಾಹ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಿದ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈಶಾನ್ಯ ರಾಜ್ಯಗಳಿಗೆ 2,000 ಕೋಟಿ ರೂಪಾಯಿ ನೆರವು ಘೋಷಿಸಿದ್ದಾರೆ.
ಪರಿಹಾರ, ಪುನರ್ವಸತಿ, ಮರು ನಿರ್ಮಾಣ ಮತ್ತು ಪ್ರವಾಹ ಪೀಡಿತ ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ತಡೆಗಟ್ಟುವಿಕೆ ಕ್ರಮವಾಗಿ ಪ್ರಧಾನಿಯವರು ಈ ಪ್ಯಾಕೇಜ್ ನ್ನು ಘೋಷಿಸಿದ್ದಾರೆ.
ಇಂದು ದಿನವಿಡೀ ಪ್ರಧಾನ ಮಂತ್ರಿಯವರು ಪ್ರತ್ಯೇಕ ಸಭೆ ನಡೆಸಿ ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ ಮತ್ತು ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿಯ ಪರಾಮರ್ಶೆ ನಡೆಸಿದರು. 
ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗದ ಮಿಜೋರಂ ಮುಖ್ಯಮಂತ್ರಿ ಲಿಖಿತ ಟಿಪ್ಪಣಿಯೊಂದನ್ನು ಬರೆದು ಕಳುಹಿಸಿದ್ದರು.
ಈ ರಾಜ್ಯಗಳ ಮೂಲಭೂತ ಸೌಕರ್ಯವೊಂದಕ್ಕೇ 1200 ಕೋಟಿ  ರೂಪಾಯಿಗಳನ್ನು  ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿದೆ. ದುರಸ್ತಿ,  ನಿರ್ವಹಣೆ, ರಸ್ತೆ ಬಲವರ್ಧನೆ, ಹೆದ್ದಾರಿ, ಸೇತುವೆ ಮತ್ತು ಇತರ ಹಾನಿಗೀಡಾದವುಗಳನ್ನು ದುರಸ್ತಿ ಮಾಡಲು ನಿಧಿಯನ್ನು ಬಳಸಿಕೊಳ್ಳಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.