ಉತ್ತರ ಪ್ರದೇಶದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ
10ನೇ ತರಗತಿ ವಿದ್ಯಾರ್ಥಿನೊಯೊಬ್ಬಳ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶ...

Published On :
ನೋಯಿಡಾ: 10ನೇ ತರಗತಿ ವಿದ್ಯಾರ್ಥಿನೊಯೊಬ್ಬಳ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶ ನೋಯಿಡಾದಲ್ಲಿ ನಡೆದಿದೆ.
ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದಕ್ಕಾಗಿ ವಿದ್ಯಾರ್ಥಿನಿಯನ್ನು ಹತ್ಯೆ ಮಾಡಲಾಗಿದೆ ಎಂದು ಸೆಕ್ಟರ್ 49 ಪೊಲೀಸ್ ಠಾಣೆಯ ಅಧಿಕಾರಿ ಗಿರೇಂದ್ರ ಪಾಲ್ ಸಿಂಗ್ ಅವರು ತಿಳಿಸಿದ್ದಾರೆ.
ಕಳೆದ ಏಪ್ರಿಲ್ 24ರಿಂದ ತನ್ನ ಮಗಳು ನಾಪತ್ತೆಯಾಗಿರುವುದಾಗಿ ವಿದ್ಯಾರ್ಥಿನಿ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಅಪಹರಣ ಕೇಸ್ ದಾಖಲಿಸಿಕೊಳ್ಳಲಾಗಿತ್ತು. ಆದರೆ ತನಿಖೆಯ ವೇಳೆ ವಿದ್ಯಾರ್ಥಿನಿಯೊಂದಿಗೆ ಹಲವು ಬಾರಿ ಮಾತನಾಡಿದ್ದ ಯಶವೀರ್ ಎಂಬಾತ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದರೆ ಅದಕ್ಕೆ ವಿರೋಧ ವಕ್ತಪಡಿಸಿದ್ದರಿಂದ ಹೊಡೆದು ಸಾಯಿಸಿದ್ದಾನೆ ಎಂದು ಗಿರೇಂದ್ರ ಸಿಂಗ್ ಅವರು ಹೇಳಿದ್ದಾರೆ.
ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದು, ವಿದ್ಯಾರ್ಥಿನಿಯನ್ನು ತನ್ನ ಗ್ರಾಮಕ್ಕೆ ಕರೆದುಕೊಂಡು ಹೋಗಿದ್ದ ಯಶವೀರ್ ಮೇ 2ರಂದು ಆಕೆಯ ಮೇಲೆ ಬಲವಂತವಾಗಿ ಅಚ್ಯಾಚಾರ ಮಾಡಲು ಯತ್ನಿಸಿದ್ದಾನೆ. ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು ಹತ್ಯೆ ಮಾಡಿ ವಿದ್ಯಾರ್ಥಿನಿಯ ಮೃತದೇಹವನ್ನು ಸಿಂಬೋಲಿ ಪ್ರದೇಶದಲ್ಲಿ ಬಿಸಾಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿ ಠಾಣಾಧಿಕಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅತ್ಯಾಚಾರಹತ್ಯೆಉತ್ತರ ಪ್ರದೇಶrapedUttara PradeshClass X Studentstrangulated to death10ನೇ ತರಗತಿ ವಿದ್ಯಾರ್ಥಿನಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


