ತೆಲಂಗಾಣ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಉಪ ಮುಖ್ಯಮಂತ್ರಿ ಕಡಿಯಾಂ ಶ್ರೀಹರಿ
ತೆಲಂಗಾಣ ಉಪ ಮುಖ್ಯಮಂತ್ರಿ ಕಡಿಯಾಂ ಶ್ರೀಹರಿ ಅವರು ತೆಲಂಗಾಣದ ಮೂರನೇ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಮ್ಮ....

Published On :
ವಾರಂಗಲ್: ತೆಲಂಗಾಣ ಉಪ ಮುಖ್ಯಮಂತ್ರಿ ಕಡಿಯಾಂ ಶ್ರೀಹರಿ ಅವರು ತೆಲಂಗಾಣದ ಮೂರನೇ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಮ್ಮ ಸರ್ಕಾರದ ಅಭಿವೃದ್ಧಿಗೆ ಸಂಬಂಧಿಸಿದ ವರದಿ ಓದುತ್ತಿದ್ದ ವೇಳೆಯೇ ಕುಸಿದುಬಿದ್ದ ಘಟನೆ ಶುಕ್ರವಾರ ನಡೆದಿದೆ.
ಇಂದು ವಾರಂಗಲ್ ನ ಪೊಲೀಸ್ ಪರೇಡ್ ಮೈದಾನದಲ್ಲಿ ಮೂರನೇ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗೌರವ ವಂದನೆ ಸ್ಪೀಕರಿಸಿದ ಬಳಿಕ ಭಾಷಣ ಮಾಡುತ್ತಿದ್ದ ವೇಳೆ ಕಡಿಯಾಂ ಶ್ರೀಹರಿ ಅವರು ದಿಢೀರ್ ಕುಸಿದು ಬಿದ್ದಿದ್ದು, ಭದ್ರತಾ ಸಿಬ್ಬಂದಿ ಕೂಡಲೇ ಅವರನ್ನು ಅವರ ಕಾರಿಗೆ ಶಿಫ್ಟ್ ಮಾಡಿದ್ದಾರೆ.
ಸ್ಥಳದಲ್ಲಿದ್ದ ವೈದ್ಯರು ಉಪ ಮುಖ್ಯಮಂತ್ರಿಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಬಿಸಿಲಿನ ತಾಪದಿಂದಾಗಿ ತೀವ್ರ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಕಡಿಯಾಂ ಶ್ರೀಹರಿ ಅವರು ಕೆಲ ನಿಮಿಷ ವಿಶ್ರಾಂತಿ ಪಡೆದು ಬಳಿಕ ತಮ್ಮ ಭಾಷಣ ಮುಂದುವರೆಸಿದರು
ತೀವ್ರ ಬಿಸಿಲಿನ ತಾಪದಿಂದಾಗಿ ಉಪ ಮುಖ್ಯಮಂತ್ರಿಗಳು ಮೂರ್ಛೆಹೋಗಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ತೆಲಂಗಾಣTelanganaಕುಸಿದು ಬೀಳುರಾಜ್ಯೋತ್ಸವ ದಿನDCM Kadiyam Srihari. collapsesformation day paradeಡಿಸಿಎಂ ಕಡಿಯಾಂ ಶ್ರೀಹರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


