ದೇಶ

ಸರ್ಜಿಕಲ್ ಸ್ಟ್ರೈಕ್ ಪರಿಣಾಮ ಗಡಿಯಲ್ಲಿ ಉಗ್ರರ ನುಸುಳುವಿಕೆ 45% ಇಳಿಕೆ: ರಾಜನಾಥ್ ಸಿಂಗ್

ಕೇಂದ್ರ ಸರ್ಕಾರ ಸೆಪ್ಟೆಂಬರ್ ನಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ ನಂತರ ಗಡಿಯಲ್ಲಿ ಒಳನುಸುಳುವಿಕೆ ಶೇ.45 ರಷ್ಟು ಕಡಿಮೆಯಾಗಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ಪರಿಣಾಮ ಗಡಿಯಲ್ಲಿ ಉಗ್ರರ ನುಸುಳುವಿಕೆ 45% ಇಳಿಕೆ: ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
Published On :
ನವದೆಹಲಿ: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಜು.03 ರಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ಕೇಂದ್ರ ಸರ್ಕಾರ ಸೆಪ್ಟೆಂಬರ್ ನಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ ನಂತರ ಗಡಿಯಲ್ಲಿ ಒಳನುಸುಳುವಿಕೆ ಶೇ.45 ರಷ್ಟು ಕಡಿಮೆಯಾಗಿದೆ ಎಂದು ಹೇಳಿದ್ದಾರೆ. 
ಪಾಕಿಸ್ತಾನದಿಂದ ಭಾರತದ ಗಡಿಯೊಳಗೆ ನುಸುಳುವವರ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸಿದರೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಆರು ತಿಂಗಳ ನಂತರ ಶೇ. 45 ರಷ್ಟು ಕಡಿಮೆಯಾಗಿದೆ ಎಂದು ಹೇಳಿದ್ದಾರೆ. ಮೋದಿ ಸರ್ಕಾರದ ಮೂರು ವರ್ಷಗಳ ಸಾಧನೆಯ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜನಾಥ್ ಸಿಂಗ್, 2016 ರ ಸೆಪ್ಟೆಂಬರ್ ನಲ್ಲಿ ಭಾರತೀಯ ಸೇನೆ ಗಡಿಯಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿ ಡಾಜನ್ ಗಟ್ಟಲೆ ಭಯೋತ್ಪಾದಕರನ್ನು ಹತ್ಯೆ ಮಾಡಿತ್ತು. ನಂತರದ ದಿನಗಳಲ್ಲಿ ಜಮ್ಮು-ಕಾಶ್ಮೀರದ ಭದ್ರತಾ ಸ್ಥಿತಿ ಉತ್ತಮಗೊಂಡಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. 
2014-2017 ವರೆಗೆ 368 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು, ಕೇಂದ್ರ ಸರ್ಕಾರ ಪಾಕಿಸ್ತಾನ ಬೆಂಬಲಿತ ಭಯೋತ್ಪಾದನೆಗೆ ಅಂತ್ಯಗೊಳಿಸಿ ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಲಿದೆ ಎಂದು ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. ಇದೇ ವೇಳೆ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರ ಬಗ್ಗೆಯೂ ಮಾತನಾಡಿರುವ ರಾಜನಾಥ್ ಸಿಂಗ್, ಮುಸ್ಲಿಂ ಜನಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದ್ದರೂ ಭಾರತದಲ್ಲಿ ಇಸೀಸ್ ತನ್ನ ನೆಲೆಯನ್ನು ಸ್ಥಾಪಿಸಲು ಸಾಧ್ಯವಾಗಿಲ್ಲ. ಈ ವರೆಗೂ 90 ಐಎಸ್ಐಎಸ್ ಬೆಂಬಲಿಗರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.  
ಇನ್ನು 2014-17 ವರೆಗೆ ನಕ್ಸಲ್ ಚಟುವಟಿಕೆಗಳೂ ಕಡಿಮೆಯಾಗಿವೆ ಎಂದು ರಾಜನಾಥ್ ಸಿಂಗ್ ಹೇಳಿದ್ದು, ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮಾವೋವಾದಿಗಳ ದಾಳಿಗೀಡಾಗಿ ಮೃತರಾಗುವವರ ಸಂಖ್ಯೆ ಶೇ.42 ರಷ್ಟು ಕಡಿಮೆಯಾಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.