ಜಮ್ಮು-ಕಾಶ್ಮೀರ: ಸೇನಾ ವಾಹನದ ಮೇಲೆ ಉಗ್ರರ ದಾಳಿ, ಇಬ್ಬರು ಯೋಧರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿರುವ ಸೇನಾ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಹುತಾತ್ಮರಾಗಿದ್ದು, ನಾಲ್ಕು ಯೋಧರಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ.

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿರುವ ಸೇನಾ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಹುತಾತ್ಮರಾಗಿದ್ದು, ನಾಲ್ಕು ಯೋಧರಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಲೋಯರ್ ಮುಂಡಾ ಟೋಲ್ ಪೋಸ್ಟ್ ಬಳಿಯ
ಖಾಜಿಗಂಡ್ ಪ್ರದೇಶದಲ್ಲಿದ್ದ ಸೇನಾ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನಾ ಪಡೆಯನ್ನು ಗುರಿಯಾಗಿಸಿಕೊಂಡು ಉಗ್ರರು ಭಾರೀ ಗುಂಡಿನ ದಾಳಿ ನಡೆಸಿದ್ದು, ಗಾಯಗೊಂಡ ಯೋಧರನ್ನು ಸೇನೆಯ 92 ಬೇಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಸ್ತುತ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಸೇನಾ ಪಡೆಗಳು ಸುತ್ತುವರೆದಿದ್ದು, ಉಗ್ರರನ್ನು ಸದೆಬಡಿಯಲು ಸೇನಾ ಪಡೆ ಕಾರ್ಯಾಚರಣೆಯನ್ನು ಆರಂಭಿಸಿದೆ. ಕಾರ್ಯಾಚರಣೆ ಹಿನ್ನಲೆಯಲ್ಲಿ ಹೆದ್ದಾರಿ ಸಂಚಾರವನ್ನು ಬಂದ್ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಜಮ್ಮು ಮತ್ತು ಕಾಶ್ಮೀರTerror Attackಉಗ್ರರ ದಾಳಿjammu-kashmirಕಾರ್ಯಾಚರಣೆsearch operationಭಾರತೀಯ ಸೇನೆಯೋಧJawanKulgamಕುಲ್ಗಾಂ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


