ಜಮ್ಮು-ಕಾಶ್ಮೀರ: ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆಯಿಂದ ದಿಟ್ಟ ಉತ್ತರ
ಜಮ್ಮು ಮತ್ತು ಕಾಶ್ಮೀರಜ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ...

Published On :
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಶನಿವಾರ ತಿಳಿದುಬಂದಿದೆ.
ಗಡಿಯಲ್ಲಿರುವ ನಾಗರಿಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಸೇನೆ ಗುಂಡು ಹಾಗೂ ಮಾರ್ಟರ್ ಶೆಲ್ ಗಳ ದಾಳಿ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪೂಂಚ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ 82 ಎಂಎಂ ಮತ್ತು 120 ಎಂಎಂ ಮಾರ್ಟರ್ ಶೆಲ್ ಗಳಿಂದ ದಾಳಿ ನಡೆಸುತ್ತಿದ್ದು, ದಾಳಿಕೆ ಭಾರತೀಯ ಸೇನೆ ಪ್ರತ್ಯುತ್ತರವನ್ನು ನೀಡುತ್ತಿದೆ. ಪ್ರಸ್ತುತ ಗಡಿಯಲ್ಲಿ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian ArmyPakistanಪಾಕಿಸ್ತಾನಜಮ್ಮು ಮತ್ತು ಕಾಶ್ಮೀರCeasefire ViolationJammu and KashmirPoonchಪೂಂಚ್ಕದನ ವಿರಾಮ ಉಲ್ಲಂಘನೆಗಡಿ ನಿಯಂತ್ರಣ ರೇಖೆಭಾರತೀಯ ಸೇನೆLoC
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


