ರಾಷ್ಟ್ರೀಯ ಭದ್ರತೆ ರಕ್ಷಣೆ ವಿಚಾರದಲ್ಲಿ ರಾಜಿ ಇಲ್ಲ: ಎನ್ಐಎ ದಾಳಿ ಬಗ್ಗೆ ಕೇಂದ್ರ ಸರ್ಕಾರ
ಜಮ್ಮು-ಕಾಶ್ಮಿರದಲ್ಲಿ ಪ್ರತ್ಯೇಕತಾವಾದಿಗಳ ವಿರುದ್ಧ ನಡೆದಿರುವ ಎನ್ಐಎ ದಾಳಿ ಬಗ್ಗೆ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿದ್ದು, ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುವ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದೆ.

Published On :
ನವದೆಹಲಿ: ಜಮ್ಮು-ಕಾಶ್ಮಿರದಲ್ಲಿ ಪ್ರತ್ಯೇಕತಾವಾದಿಗಳ ವಿರುದ್ಧ ನಡೆದಿರುವ ಎನ್ಐಎ ದಾಳಿ ಬಗ್ಗೆ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿದ್ದು, ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುವ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದೆ.
ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಈ ಬಗ್ಗೆ ಮಾತನಾಡಿದ್ದು, ರಾಷ್ಟ್ರೀಯ ಭದ್ರತೆ ವಿಚಾರವಾಗಿ ಸೇನಾ ಕಾರ್ಯಾಚರಣೆ ಹಾಗೂ ಎನ್ಐಎ ಕಾರ್ಯಾಚರಗೆ ಸಂಬಂಧಿಸಿದಂತೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಕಾಶ್ಮೀರದ ಜನತೆ ಪ್ರತ್ಯೇಕತಾವಾದಿಗಳು ಉಂಟು ಮಾಡಿರುವ ಸಮಸ್ಯೆಯಿಂದ ಹೊರಬರಲು ಯತ್ನಿಸುತ್ತಿದ್ದಾರೆ. ರಾಜ್ಯ ಅಭಿವೃದ್ಧಿಯಾಗುವ ಅವಕಾಶವನ್ನು ಬಿಟ್ಟುಕೊಡುವುದಕ್ಕೆ ರಾಜ್ಯದ ಜನತೆ ಸಿದ್ಧರಿಲ್ಲ ಎಂದು ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕೇಂದ್ರ ಸರ್ಕಾರNational Investigation Agencyಎನ್ಐಎKashmiri separatistunion Governmentಕಾಶ್ಮೀರಿ ಪ್ರತ್ಯೇಕತಾವಾದಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


